
ರಾಹುಲ್ ಗಾಂಧಿ ಮಾತಿನಿಂದ ಸದನದಲ್ಲಿ ಕೋಲಾಹಲ, ವಿಧಾನಸಭೆಯಲ್ಲಿ ಸಿಎಂ ಉತ್ತರ ಸೇರಿ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ವಿವರ ಇಲ್ಲಿದೆ.

ನವದೆಹಲಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಬ್ಸಿಡಿಗಳು ಮತ್ತು ಗ್ಯಾರಂಟಿಯಂತಹ ನೇರ ನಗದು ವರ್ಗಾವಣೆ ಯೋಜನೆಗಳಿಂದ ಭವಿಷ್ಯದ ಆರ್ಥಿಕ ಸ್ಥಿರತೆ ಹಾಳಾಗಲಿದೆ ಎಂದು 16ನೇ ಹಣಕಾಸು ಆಯೋಗ ಎಚ್ಚರಿಸಿದೆ.
ಮತದಾರರ ಮನ ಗೆಲ್ಲಲು ಚುನಾವಣೆಗೆ ಮುನ್ನ ಅಥವಾ ಅಧಿಕಾರಕ್ಕೆ ಬಂದ ಕೂಡಲೇ ರಾಜಕೀಯ ಪಕ್ಷಗಳು ಹಾಗೂ ಸರ್ಕಾರಗಳು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಪ್ರವೃತ್ತಿ ಹೆಚ್ಚುತ್ತಿರುವ ಸಮಯದಲ್ಲೇ ಆಯೋಗ ಈ ಎಚ್ಚರಿಕೆ ನೀಡಿದೆ.
ಚಾಮರಾಜನಗರ: ಕೇರಳ ಹಾಗೂ ಕರ್ನಾಟಕ ನಡುವೆ ಹಾದು ಹೋಗಿರುವ ಬಂಡೀಪುರ ಅಭಯಾರಣ್ಯದೊಳಗೆ ರಾತ್ರಿಯ ಹೊತ್ತು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಪರ್ಯಾಯ ಸುರಂಗ ಮಾರ್ಗ ನಿರ್ಮಾಣ ಮಾಡುವ ಸಂಬಂಧ ಕಾರ್ಯಸಾಧ್ಯತಾ ವರದಿ ತಯಾರಿಸಲು ಕೇಂದ್ರ ಹೆದ್ದಾರಿ ಸಚಿವಾಲಯ ತಜ್ಞರ ಸಮಿತಿ ನೇಮಿಸಲು ಮುಂದಾಗಿರುವ ಕ್ರಮಕ್ಕೆ ಪರಿಸರವಾದಿಗಳು, ವನ್ಯಜೀವಿ ತಜ್ಞರು, ರೈತರು ಹಾಗೂ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ‘ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮಾಡಿದ ಶೇ 80ರಷ್ಟು ಕಮಿಷನ್ ಆರೋಪ ಸುಳ್ಳಾಗಿದ್ದರೆ ಕ್ರಮ ಕೈಗೊಳ್ಳಬಹುದಿತ್ತು. ಮೌನ ಗಮನಿಸಿದರೆ ಸರ್ಕಾರ ತಪ್ಪು ಮಾಡಿರುವುದು ಸತ್ಯ ಎನಿಸುತ್ತದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಸಿದ್ದರಾಮಯ್ಯ
ಬೆಂಗಳೂರು: ‘ರಾಜ್ಯಪಾಲರು ಪೂರ್ತಿ ಭಾಷಣ ಓದದೆ, ‘ಜೈ ಸಂವಿಧಾನ’ ಎನ್ನುವುದನ್ನೂ ಉಲ್ಲೇಖಿಸದೆ, ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಆತುರಾತುರವಾಗಿ ಹೋದರು. ಇದು ಸರಿಯಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ ತಾಲ್ಲೂಕುಗಳ ಬೆಟ್ಟ ಗುಡ್ಡಗಳಲ್ಲಿ ಚಿನ್ನದ ನಿಕ್ಷೇಪಗಳಿಗಾಗಿ ಮೂರು ದಿನಗಳಿಂದ ವೈಮಾನಿಕ ಸಮೀಕ್ಷೆ ನಡೆಸಲಾಗುತ್ತಿದೆ.
ಸಿ.ಜೆ.ರಾಯ್
ತಿರುವನಂತಪುರ: ಕೇರಳದ ಉದ್ಯಮಿ, ರಿಯಲ್ ಎಸ್ಟೇಟ್ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ರಾಜ್ಯದ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಪ್ರತಿಕ್ರಿಯೆಗಳು ಎಲ್ಲರ ಹುಬ್ಬೇರುವಂತೆ ಮಾಡಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಭಾರತದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ/ ವಾಷಿಂಗ್ಟನ್: ‘ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ಘೋಷಿಸಿದ್ದಾರೆ.
ನವದೆಹಲಿ: ಭಾರತ–ಅಮೆರಿಕ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇಗಳು, ಉದ್ಯಮಿಗಳು ಮತ್ತು ಕೌಶಲ್ಯಯುಕ್ತ ಕಾರ್ಮಿಕರಿಗೆ ವಿಫುಲ ಅವಕಾಶಗಳು ಲಭ್ಯವಾಗಲಿದ್ದು ’ಮೇಕ್ ಇನ್ ಇಂಡಿಯಾ‘ಗೆ ಬಲ ದೊರೆಯಲಿದೆ ಎಂದು ಕೇಂದ್ರ ಸಚಿವ ಪೀಯೂಷ್ ಗೋಯಲ್ ಮಂಗಳವಾರ ಹೇಳಿದರು.
ರಾಹುಲ್ ಗಾಂಧಿ
ನವದೆಹಲಿ: ಭಾರತ ಮತ್ತು ಚೀನಾ ನಡುವೆ 2020ರಲ್ಲಿ ಲಡಾಖ್‌ನಲ್ಲಿ ನಡೆದ ಸೇನಾ ತಿಕ್ಕಾಟದ ಬಗ್ಗೆ, ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದಲ್ಲಿನ ಅಂಶಗಳ ಕುರಿತು ನಿಯತಕಾಲಿಕವೊಂದರಲ್ಲಿ ಪ್ರಕಟವಾಗಿರುವ ಲೇಖನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಸೋಮವಾರ ಪ್ರಸ್ತಾಪಿಸಿದ್ದು ಭಾರಿ ಗದ್ದಲ ಎಬ್ಬಿಸಿತು.
ರಾಹುಲ್ ಗಾಂಧಿ
ನವದೆಹಲಿ: ಭಾರತ ಮತ್ತು ಚೀನಾ ನಡುವೆ 2020ರಲ್ಲಿ ಲಡಾಖ್‌ನಲ್ಲಿ ನಡೆದ ಸೇನಾ ತಿಕ್ಕಾಟದ ಬಗ್ಗೆ, ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದಲ್ಲಿನ ಅಂಶಗಳ ಕುರಿತು ನಿಯತಕಾಲಿಕವೊಂದರಲ್ಲಿ ಪ್ರಕಟವಾಗಿರುವ ಲೇಖನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಸೋಮವಾರ ಪ್ರಸ್ತಾಪಿಸಿದ್ದು ಭಾರಿ ಗದ್ದಲ ಎಬ್ಬಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.