ADVERTISEMENT

ಭಾರತ–ಅಮೆರಿಕ ವಾಣಿಜ್ಯ ಒಪ್ಪಂದದ ವಿವರಗಳು ಅಂತಿಮ ಹಂತದಲ್ಲಿ: ಎಸ್‌.ಜೈಶಂಕರ್‌

ಭಾರತೀಯ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹೇಳಿಕೆ

ಪಿಟಿಐ
Published 5 ಫೆಬ್ರುವರಿ 2026, 16:11 IST
Last Updated 5 ಫೆಬ್ರುವರಿ 2026, 16:11 IST
ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಜೊತೆ ಅವರಿಗೆ ಹಸ್ತಲಾಘವ ಮಾಡಿದರು–ಪಿಟಿಐ ಚಿತ್ರ
ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಜೊತೆ ಅವರಿಗೆ ಹಸ್ತಲಾಘವ ಮಾಡಿದರು–ಪಿಟಿಐ ಚಿತ್ರ   

ನವದೆಹಲಿ: ‘ಭಾರತ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ವಿವರಗಳು ಅಂತಿಮ ಹಂತದಲ್ಲಿದ್ದು, ಆದಷ್ಟು ಬೇಗ ಪೂರ್ಣಗೊಳ್ಳಲಿವೆ’ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದ್ದಾರೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಜೊತೆಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ಈ ವಿಷಯ ತಿಳಿಸಿದ್ದಾರೆ.

‘ವಾಷಿಂಗ್ಟನ್‌ ಭೇಟಿಯೂ ಫಲಪ್ರದವಾಗಿದ್ದು, ದ್ವಿಪಕ್ಷೀಯ ವ್ಯಾಪಾರ ಒಪ್ಪಂದವು ಎರಡು ದೇಶಗಳ ನಡುವಿನ ಸಂಬಂಧವನ್ನು ಹೊಸ ಹಂತಕ್ಕೆ ಕೊಂಡೊಯ್ಯಲಿದೆ’ ಎಂದು ಹೇಳಿದ್ದಾರೆ.

ADVERTISEMENT

‘ಅಪರೂಪ‍ದ ಖನಿಜಗಳ ಸಹಕಾರದ ವಿಚಾರದಲ್ಲಿ ಸಹ ವೇಗವಾಗಿ ಮುಂದುವರಿಯುತ್ತಿದೆ. ಇದಾದ ಬಳಿಕ ರಕ್ಷಣೆ, ಇಂಧನ ಕ್ಷೇತ್ರದಲ್ಲಿಯೂ ದ್ವಿಪಕ್ಷೀಯ ಸಂಬಂಧ ಮುಂದಿನ ದಿನಗಳಲ್ಲಿ ನೆರವೇರಲಿದೆ. ಒಟ್ಟಾರೆಯಾಗಿ ಬಲವಾದ ವೇಗವೂ ಸ್ಪಷ್ಟವಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.