ಭಾರತ – ಅಮೆರಿಕ
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆ ಹೊತ್ತ ಲಷ್ಕರ್ –ಎ–ತಯಬಾ (ಎಲ್‌ಇಟಿ) ಸಂಘಟನೆಯ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್)ಘಟಕವನ್ನು ಭಯೋತ್ಪಾದಕ ಪಟ್ಟಿಗೆ ಸೇರಿಸಿರುವ ಅಮರಿಕ ಕ್ರಮವನ್ನು ಭಾರತ ಸ್ವಾಗತಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ‘ಇದು ಭಾರತ-ಅಮೆರಿಕ ಭಯೋತ್ಪಾದನಾ ನಿಗ್ರಹ ಸಹಕಾರದ ಬಲವಾದ ಬದ್ಧತೆಯಾಗಿದೆ’ ಎಂದು ಹೇಳಿದ್ದು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರನ್ನು ಹೊಗಳಿದ್ದಾರೆ.
ಟಿಆರ್‌ಎಫ್‌ಅನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಿ ಅಮೆರಿಕ ಗುರುವಾರ ಪ್ರಕಟಣೆ ಹೊರಡಿಸಿತ್ತು. ಅಲ್ಲದೆ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಬಗ್ಗೆ ಉಲ್ಲೇಖಿಸಿ, ‘ ಈ ಕ್ರಮವು ಪಹಲ್ಗಾಮ್ ದಾಳಿಗೆ ನ್ಯಾಯ ಒದಗಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಭರವಸೆಯನ್ನು ಈಡೇರಿಸುವ ಮತ್ತು ಅಮೆರಿಕದ ಭದ್ಧತೆಯನ್ನು ಪ್ರದರ್ಶಿಸುತ್ತದೆ’ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.