ADVERTISEMENT

ಕೊರೊನಾವೈರಸ್ ಸೋಂಕು ತಡೆಗೆ ಕಠಿಣ ಕ್ರಮಕೈಗೊಳ್ಳಲು ರಾಹುಲ್‌ ಗಾಂಧಿ ಆಗ್ರಹ

ಪಿಟಿಐ
Published 17 ಜುಲೈ 2020, 9:32 IST
Last Updated 17 ಜುಲೈ 2020, 9:32 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಮುಂದಿನ ತಿಂಗಳ 10ರ ವೇಳೆಗೆ ಭಾರತದಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ 20 ಲಕ್ಷ ದಾಟಲಿದ್ದು, ಸೋಂಕು ಹರಡುವುದನ್ನು ತಡೆಯಲು ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

ಈಗಾಗಲೇ ಸೋಂಕಿತರ ಸಂಖ್ಯೆ 10 ಲಕ್ಷ ದಾಟಿದೆ. ಸೋಂಕು ಹರಡುವುದು ಇದೇ ಪ್ರಮಾಣದಲ್ಲಿ ಮುಂದುವರಿದರೆ ಬರುವ ತಿಂಗಳ 10ರ ವೇಳೆಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 20 ಲಕ್ಷ ದಾಟಲಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಸಮಗ್ರ ಮತ್ತು ಯೋಜಿತ ಕ್ರಮಗಳನ್ನು ತೆಗೆದುಕೊಳ್ಳಲೇಬೇಕು ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT

ಗುರುವಾರದ ವೇಳೆಗೆ ಭಾರತದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಹರಡಿದ್ದು, 25 ಸಾವಿರ ಮಂದಿ ಸಾವನ್ನಪ್ಪಿದ್ದಾರೆ. ಜಾಗತಿಕ ಮಟ್ಟದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಅಮೆರಿಕ ಮತ್ತು ಬ್ರೆಜಿಲ್‌ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.