ADVERTISEMENT

ಗಣರಾಜ್ಯೋತ್ಸವಕ್ಕೆ ‘ವಿದೇಶಿ ಅತಿಥಿ’ ಇಲ್ಲ: ಸಚಿವಾಲಯ

ಪಿಟಿಐ
Published 14 ಜನವರಿ 2021, 16:23 IST
Last Updated 14 ಜನವರಿ 2021, 16:23 IST
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಗುರುವಾರ ತಾಲೀಮು ನಡೆಸಿದ ಸೈನಿಕರು –ಎಎಫ್‌ಪಿ ಚಿತ್ರ
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಗುರುವಾರ ತಾಲೀಮು ನಡೆಸಿದ ಸೈನಿಕರು –ಎಎಫ್‌ಪಿ ಚಿತ್ರ   

ನವದೆಹಲಿ: ‘ಈ ಬಾರಿಯ ಗಣರಾಜ್ಯೋತ್ಸವದಲ್ಲಿ ವಿದೇಶದ ಯಾವ ಗಣ್ಯರೂ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿಲ್ಲ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಗುರುವಾರ ಹೇಳಿದೆ.

ಹೀಗಾಗಿ ಐದು ದಶಕಗಳಲ್ಲಿ ಇದೇ ಮೊದಲ ಬಾರಿಗೆ ವಿದೇಶಿ ಅತಿಥಿ ಇಲ್ಲದೆಯೇ ಗಣರಾಜ್ಯ ದಿನವನ್ನು ಆಚರಿಸಲಾಗುತ್ತಿದೆ.

‘ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ವಿದೇಶಿ ಗಣ್ಯರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸದಿರಲು ತೀರ್ಮಾನಿಸಲಾಗಿದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್‌ ಶ್ರೀವಾಸ್ತವ ತಿಳಿಸಿದ್ದಾರೆ.

ADVERTISEMENT

ಹೋದ ತಿಂಗಳು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದರು. ಇದಕ್ಕೆ ಜಾನ್ಸನ್‌ ಅವರೂ ಒಪ್ಪಿಗೆ ಸೂಚಿಸಿದ್ದರು.

ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ವೈರಸ್‌ ಕಾಣಿಸಿಕೊಂಡಿದ್ದರಿಂದ ಜಾನ್ಸನ್‌ ಅವರು ಕೊನೆ ಕ್ಷಣದಲ್ಲಿ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.