ADVERTISEMENT

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಮಾರ್ಚ್ 2023, 9:30 IST
Last Updated 16 ಮಾರ್ಚ್ 2023, 9:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಪತನಗೊಂಡಿದೆ.

ಬೊಮ್ಡಿಲಾ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 9.15ರ ಸುಮಾರಿಗೆ ಪತನಗೊಂಡಿದ್ದು, ಎಟಿಸಿ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ.

ಘಟನಾ ಸ್ಥಳದಲ್ಲಿ ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ADVERTISEMENT

ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.