ADVERTISEMENT

Indian Army Day 74ನೇ ಭಾರತೀಯ ಸೇನಾ ದಿನ: ಈ ದಿನದ ಮಹತ್ವವೇನು? ಇಲ್ಲಿದೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 4:18 IST
Last Updated 15 ಜನವರಿ 2022, 4:18 IST
ನವದೆಹಲಿಯ ಸೇನಾ ಪರೇಡ್ ಗ್ರೌಂಡ್‌ನಲ್ಲಿ ಸೇನಾ ದಿನದ ಪೂರ್ವಾಭ್ಯಾಸದಲ್ಲಿ ಭಾರತೀಯ ಸೇನಾ ಬ್ಯಾಂಡ್ ಪ್ರದರ್ಶನ: ಪಿಟಿಐ ಚಿತ್ರ
ನವದೆಹಲಿಯ ಸೇನಾ ಪರೇಡ್ ಗ್ರೌಂಡ್‌ನಲ್ಲಿ ಸೇನಾ ದಿನದ ಪೂರ್ವಾಭ್ಯಾಸದಲ್ಲಿ ಭಾರತೀಯ ಸೇನಾ ಬ್ಯಾಂಡ್ ಪ್ರದರ್ಶನ: ಪಿಟಿಐ ಚಿತ್ರ   

ನವದೆಹಲಿ: ದೇಶವು ಇಂದು (ಜನವರಿ 15, 2022) 74ನೇ ಭಾರತೀಯಸೇನಾ ದಿನವನ್ನು ಆಚರಿಸುತ್ತಿದೆ. ಪ್ರತಿ ವರ್ಷ ಈ ದಿನದಂದು, ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ ಮತ್ತು ಸಹೋದರತ್ವದ ಶ್ರೇಷ್ಠ ಉದಾಹರಣೆಯನ್ನು ನೀಡಿದ ಸೈನಿಕರನ್ನು ಗೌರವಿಸಲಾಗುತ್ತದೆ. ಈ ದಿನವನ್ನು ಎಲ್ಲಾ ಸೇನಾ ಕಮಾಂಡ್ ಪ್ರಧಾನ ಕಚೇರಿಗಳಲ್ಲಿ ಆಚರಿಸಲಾಗುತ್ತದೆ. ಕೋವಿಡ್–19 ಸಾಂಕ್ರಾಮಿಕದ ಮೂರನೇ ಅಲೆಯ ಕಾರಣ, ಕಟ್ಟುನಿಟ್ಟಾದ ಪ್ರೋಟೋಕಾಲ್‌ಗಳ ನಡುವೆ ಈ ದಿನವನ್ನು ಆಚರಿಸಲಾಗುತ್ತಿದೆ.

ಜನವರಿ 15ರಂದೇ ಸೇನಾ ದಿನ ಏಕೆ?

ಏಪ್ರಿಲ್ 1, 1895 ರಂದು ಭಾರತೀಯ ಸೇನೆಯನ್ನು ಅಧಿಕೃತವಾಗಿ ಸ್ಥಾಪಿಸಲಾಯಿತು. ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ1949 ರಲ್ಲಿಸೇನೆಯ ಮೊದಲ ಮುಖ್ಯಸ್ಥರನ್ನು ನೇಮಕ ಮಾಡಲಾಯಿತು. ಈ ಐತಿಹಾಸಿಕ ದಿನದಂದು ಭಾರತೀಯ ಸೇನೆಯ ಔಪಚಾರಿಕ ಹಸ್ತಾಂತರ ಪ್ರಕ್ರಿಯೆ ನಡೆಯಿತು. ಜನರಲ್ ಸರ್ ಫ್ರಾನ್ಸಿಸ್ ಬುಚರ್ ಅವರು ಲೆಫ್ಟಿನೆಂಟ್ ಜನರಲ್ ಕೆ.ಎಂ.ಕಾರ್ಯಪ್ಪ ಅವರಿಗೆ ಬ್ಯಾಟನ್ ಹಸ್ತಾಂತರಿಸಿದ್ದರು.

ADVERTISEMENT

ಐತಿಹಾಸಿಕ ಹಿನ್ನೆಲೆ

ಬ್ರಿಟಿಷರಿಂದ ಭಾರತಕ್ಕೆ ಅಧಿಕಾರದ ಹಸ್ತಾಂತರವು ಭಾರತದ ಇತಿಹಾಸದಲ್ಲಿ ಮತ್ತು ವಿದೇಶಿ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ಅತ್ಯಂತ ಪ್ರಮುಖ ಅಧ್ಯಾಯವಾಗಿದೆ.

ಈ ದಿನದಂದು ಎಲ್ಲಾ ಕಮಾಂಡ್ ಹೆಡ್‌ಕ್ವಾರ್ಟರ್‌ಗಳು ಮತ್ತು ನವದೆಹಲಿಯ ಮುಖ್ಯ ಪ್ರಧಾನ ಕಚೇರಿಗಳಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಮಿಲಿಟರಿ ಮೆರವಣಿಗೆಗಳು ಮತ್ತು ಭಾರತೀಯ ಸೇನೆಯಲ್ಲಿ ಇತ್ತೀಚೆಗೆ ಅಳವಡಿಸಿಕೊಂಡಿರುವ ತಂತ್ರಜ್ಞಾನದ ಪ್ರದರ್ಶನಗಳು ಇರುತ್ತವೆ.

ಈ ವರ್ಷ ಪ್ರದರ್ಶನದಲ್ಲಿ ಏನನ್ನು ನಿರೀಕ್ಷಿಸಬಹುದು?

ಡ್ರೋನ್‌ಗಳು, ಸುಧಾರಿತ ಲಘು ಹೆಲಿಕಾಪ್ಟರ್‌ಗಳು, ಭಾರತೀಯ ಸೇನೆಯು ಗಾಲ್ವಾನ್ ಸೆಕ್ಟರ್‌ನಲ್ಲಿ ನಿಯೋಜಿಸಲು ಯೋಜಿಸಿರುವ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಉತ್ಪಾದಿಸಿರುವ ಹೊಸ ಲಘು ಯುದ್ಧ ಹೆಲಿಕಾಪ್ಟರ್‌ಗಳು ಈ ಪ್ರದರ್ಶನದಲ್ಲಿ ಗಮನ ಸೆಳೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.