ADVERTISEMENT

ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಧ್ವಂಸಗೊಳಿಸಿದ ಭಾರತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮೇ 2025, 4:13 IST
Last Updated 10 ಮೇ 2025, 4:13 IST
<div class="paragraphs"><p>ಪಾಕಿಸ್ತಾನದ ಡ್ರೋನ್ ಲಾಂಚ್‌ಪ್ಯಾಡ್‌ ಅನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.</p></div>

ಪಾಕಿಸ್ತಾನದ ಡ್ರೋನ್ ಲಾಂಚ್‌ಪ್ಯಾಡ್‌ ಅನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.

   

ನವದೆಹಲಿ: ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಪ್ರದೇಶಗಳ ಉಗ್ರರ ದಮನಕ್ಕೆ ಭಾರತ ಸೇನೆಯು ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ಆರಂಭಿಸಿದ ಬಳಿಕ ಉಭಯ ದೇಶಗಳ ನಡುವಿನ ಸಂಘರ್ಷ ತಾರಕಕ್ಕೆ ಏರಿದೆ. ಇದರ ಬೆನ್ನಲ್ಲೇ ಪಾಕ್‌ ಸೇನೆಯು ನಡೆಸಿದ ಡ್ರೋನ್‌ ಹಾಗೂ ಕ್ಷಿಪಣಿ ದಾಳಿಗಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.

ಡ್ರೋನ್‌ ದಾಳಿಗಳನ್ನು ನಡೆಸಲು ಪಾಕಿಸ್ತಾನ ಬಳಸುತ್ತಿದ್ದ ಮಿಲಿಟರಿ ಪೋಸ್ಟ್‌ಗಳು ಮತ್ತು ಲಾಂಚ್‌ಪ್ಯಾಡ್‌ಗಳನ್ನು ಭಾರತೀಯ ಸೇನಾಪಡೆಗಳು ನಾಶಪಡಿಸಿವೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ADVERTISEMENT

ಪಾಕಿಸ್ತಾನವು ಟ್ಯೂಬ್ ಲಾಂಚ್‌ಪ್ಯಾಡ್‌ ಅನ್ನು ಡ್ರೋನ್‌ಗಳನ್ನು ಉಡಾಯಿಸಲು ಬಳಸುತ್ತಿತ್ತು. ಜಮ್ಮು ಬಳಿ ನೆಲೆಗೊಂಡಿರುವ ಭಾರತೀಯ ಸೇನಾ ಪಡೆಗಳು ಈ ಕಾರ್ಯಾಚರಣೆಯನ್ನು ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‌ಪಾಕಿಸ್ತಾನ ಸೇನೆಯು ಶುಕ್ರವಾರ ರಾತ್ರಿಯೂ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆ, ಪಂಜಾಬ್‌ನ ಫಿರೋಜ್‌ಪುರ, ರಾಜಸ್ಥಾನದ ಪೋಖರಣ್‌ ಮತ್ತಿತರ ಕಡೆಗಳಲ್ಲಿ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿದೆ. ಇವುಗಳನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಹೆಚ್ಚಿನ ಭಾಗಗಳಲ್ಲಿ ಬ್ಲ್ಯಾಕ್ಔಟ್‌ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.