ADVERTISEMENT

ಕೊಳವೆ ಬಾವಿಗೆ ಬಿದ್ದ 18 ತಿಂಗಳ ಮಗುವಿನ ರಕ್ಷಣೆ: ಯೋಧರ ಕೆಲಸಕ್ಕೆ ಮೆಚ್ಚುಗೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2022, 10:21 IST
Last Updated 9 ಜೂನ್ 2022, 10:21 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಅಹಮದಾಬಾದ್‌: ಕೊಳವೆ ಬಾವಿಯಲ್ಲಿ ಬಿದ್ದ 18 ತಿಂಗಳ ಮಗುವನ್ನು ರಕ್ಷಣೆ ಮಾಡುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ. ಮಗು ಸುರಕ್ಷಿತವಾಗಿದೆ ಎಂದು ಗುಜರಾತ್‌ ಪೊಲೀಸರು ಹೇಳಿದ್ದಾರೆ.

ಗುಜರಾತ್ನ ಸುರೇಂದ್ರ ನಗರ ಜಿಲ್ಲೆಯ ದುದ್ದಾಪುರ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂರುವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಯೋಧರು, ಮಗು ಶಿವಂನನ್ನು ರಕ್ಷಣೆ ಮಾಡಿದ್ದಾರೆ.

ಮಂಗಳವಾರ ಸಂಜೆ 7 ಗಂಟೆ ಸಮಯದಲ್ಲಿ ಹೊಲದಲ್ಲಿ ಆಟವಾಡುತ್ತಿದ್ದ ಶಿವಂ ದಿಢೀರ್ ಕೊಳೆವೆ ಬಾವಿಗೆ ಬಿದ್ದಿದ್ದಾನೆ. ಬೋರ್‌ವೆಲ್‌ನಲ್ಲಿ ಶಿವಂ ಅಳುವ ಶಬ್ಧ ಕೇಳಿದ ಪೋಷಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಬಂದ ಯೋಧರು 20 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ ಮಗುವಿನ ರಕ್ಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಗ್ನಿಶಾಮಕ ದಳ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮಗುವನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಮಗು ಸುರಕ್ಷಿತವಾಗಿದ್ದು ಮನೆಗೆ ಮರಳಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಗು ರಕ್ಷಣೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.