ADVERTISEMENT

ಸಿಕ್ಕಿಂನಲ್ಲಿ ಸಿಲುಕಿದ್ದ 800ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಿದ ಸೇನೆ

ಪಿಟಿಐ
Published 14 ಡಿಸೆಂಬರ್ 2023, 2:52 IST
Last Updated 14 ಡಿಸೆಂಬರ್ 2023, 2:52 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಪಿಟಿಐ

ಗ್ಯಾಂಗ್ಟಕ್‌: ಪೂರ್ವ ಸಿಕ್ಕಿಂನ ಅತ್ಯಂತ ಎತ್ತರದ ಪ್ರದೇಶಗಳಲ್ಲಿ ಸಿಲುಕಿದ್ದ 800ಕ್ಕೂ ಅಧಿಕ ಪ್ರವಾಸಿಗರನ್ನು ಭಾರತೀಯ ಸೇನೆ ಬುಧವಾರ ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಭಾರಿ ಪ್ರಮಾಣದಲ್ಲಿ ಹಿಮ ಸುರಿಯುತ್ತಿದ್ದುದರಿಂದ ಹಾಗೂ ಬಿರುಗಾಳಿಯಿಂದಾಗಿ ವೃದ್ಧರು, ಮಹಿಳೆಯರು ಮತ್ತು ಮಕ್ಕಳೂ ಸೇರಿದಂತೆ ಪ್ರವಾಸಿಗರು ಹಲವು ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದರು.

ಸೇನೆಯ 'ತ್ರಿಶಕ್ತಿ ಪಡೆ' ರಾತ್ರಿಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಿ, ಎಲ್ಲ ಪ್ರವಾಸಿಗರನ್ನೂ ಸುರಕ್ಷಿತ ಸ್ಥಳಗಳಿಗೆ ಕರೆತಂದಿದೆ. ಎಲ್ಲರಿಗೂ ಆಶ್ರಯ, ಬಿಸಿ ಆಹಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂತ್ರಸ್ತ ಪ್ರವಾಸಿಗರಿಗೆ ಆಶ್ರಯ ಕಲ್ಪಿಸುವುದಕ್ಕಾಗಿ ಯೋಧರು ತಮ್ಮ ವಸತಿ ಸಂಕೀರ್ಣಗಳನ್ನು ತಾತ್ಕಾಲಿಕವಾಗಿ ಖಾಲಿ ಮಾಡಿದ್ದಾರೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.