PM ಮೋದಿಯೊಂದಿಗೆ ಗಗನಯಾತ್ರಿ ಶುಭಾಂಶು
ಚಿತ್ರ ಕೃಪೆ: @narendramodi
ನವದೆಹಲಿ: ಗಗನಯಾನ ಪೂರ್ಣಗೊಳಿಸಿ ಭಾರತಕ್ಕೆ ಮರಳಿದ ಗಗನಯಾನಿ ಶುಭಾಂಶು ಶುಕ್ಲಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ತಮ್ಮ ಬಾಹ್ಯಾಕಾಶ ಯಾನದ ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಭಾರತದ ಗಗನಯಾನ ಮಿಷನ್ ಬಗ್ಗೆ ಪ್ರಪಂಚದಾದ್ಯಂತ ಹೆಚ್ಚಿನ ಆಸಕ್ತಿ ಇದ್ದು, ವಿಜ್ಞಾನಿಗಳು ಆಕ್ಸಿಯಮ್ -4 ಮಿಷನ್ ಉಡಾವಣೆಯ ಬಗ್ಗೆ ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ. ಗಗನಯಾತ್ರಿ ಶುಭಾಂಶು ಶುಕ್ಲಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದರು.
ಆಕ್ಸಿಯಮ್ -4 ಮಿಷನ್‌ನ ಭಾಗವಾಗಿ ಬಾಹ್ಯಾಕಾಶದಲ್ಲಿ ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ಬಗ್ಗೆ ಮತ್ತು ಕಕ್ಷೆಯ ಪ್ರಯೋಗಾಲಯದಲ್ಲಿ ನಡೆಸಿದ ಪ್ರಯೋಗಗಳ ಅನುಭವಗಳನ್ನು ಶುಭಾಂಶು ಪ್ರಧಾನ ಮಂತ್ರಿಯವರಿಗೆ ವಿವರಿಸಿದರು.
ಶುಭಾಂಶು ಮಾತಿಗೆ ಪ್ರತಿಕ್ರಿಯಿಸಿದ ಮೋದಿ, ಮುಂದಿನ ದಿನಗಳಲ್ಲಿ ಭಾರತದಿಂದ ಬಾಹ್ಯಾಕಾಶ ಯಾನಗಳಿಗೆ 40-50 ಗಗನಯಾತ್ರಿಗಳ ಗುಂಪನ್ನು ಸಿದ್ಧಪಡಿಸುವ ಅವಶ್ಯಕತೆಯಿದೆ ಎಂದರು.
ಭಾರತವು 2027 ರಲ್ಲಿ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟವನ್ನು ಹಾಗೂ 2035 ರ ವೇಳೆಗೆ ಭಾರತೀಯ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲು ಯೋಜನೆ ಮಾಡಲಾಗುವುದು ಎಂದರು.
2040 ರ ವೇಳೆಗೆ ಚಂದ್ರನ ಮೇಲೆ ತನ್ನದೇ ಆದ ಗಗನಯಾತ್ರಿಯನ್ನು ಇಳಿಸುವ ಯೋಜನೆಯನ್ನು ಭಾರತ ಹೊಂದಿದೆ ಎಂದು ಶುಭಾಂಶುಗೆ ಮೋದಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.