ನವದೆಹಲಿ: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಮೂವರ ಅಂತರಿಕ್ಷಯಾನವನ್ನು ಜೂನ್ 11ಕ್ಕೆ ಮುಂದೂಡಲಾಗಿದೆ ಎಂದು ಇಸ್ರೊ ತಿಳಿಸಿದೆ.
ಫ್ಲಾರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್–9 ರಾಕೆಟ್‌ನ ಉಡಾವಣೆಯು ಮಂಗಳವಾರ ಸಂಜೆ ನಿಗದಿಯಾಗಿತ್ತು.
‘ಹವಾಮಾನ ವೈಪರೀತ್ಯದ ಕಾರಣಕ್ಕೆ ಫಾಲ್ಕನ್–9 ರಾಕೆಟ್ ಉಡಾವಣೆಯನ್ನು ಜೂನ್ 11ರ ಸಂಜೆ 5:30ಕ್ಕೆ ಮುಂದೂಡಲಾಗಿದೆ’ ಎಂದು ಇಸ್ರೊ ಅಧ್ಯಕ್ಷ ವಿ.ನಾರಾಯಣನ್ ಅವರು ತಿಳಿಸಿದ್ದಾರೆ.
‘ಆ್ಯಕ್ಸಿಯಂ–4’ ಕಾರ್ಯಕ್ರಮದ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿರುವ ಶುಕ್ಲಾ ಅವರೊಂದಿಗೆ, ಕಮಾಂಡರ್ ಪೆಗ್ಗಿ ವಿಟ್ಸನ್, ಹಂಗರಿಯ ಟಿಬೊರ್ ಕಾಪು ಹಾಗೂ ಪೋಲಂಡ್‌ನ ಸ್ಲಾವೋಸ್ ಯು.ವಿನ್ಸೀವ್ಸ್‌ಕಿ ಕೂಡ ಪಯಣಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.