ನವದೆಹಲಿ: ಗಡಿಯಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾದ ಸೇನಾ ಅಧಿಕಾರಿಗಳು ಪೂರ್ವ ಲಡಾಖ್‌ನಲ್ಲಿ ಭಾನುವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
‘ಚುಶುಲ್ ಪ್ರದೇಶದ ಸಮೀಪಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಮಾತುಕತೆ ನಡೆದಿದ್ದು ಇದು ಅಷ್ಟೇನು ಫಲಪ್ರದವಾಗಿಲ್ಲ’ ಎಂದು ಮೂಲಗಳು ತಿಳಿಸಿವೆ.
ಭಾರತದ ಸೇನೆಯು ಸಕಲ ರೀತಿಯಲ್ಲೂ ಸನ್ನದ್ಧವಾಗಿದ್ದು, ಎಂತಹುದೇ ಪರಿಸ್ಥಿತಿಯನ್ನು ಎದುರಿಸಲೂ ತಯಾರಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.