ADVERTISEMENT

ಎರಡು ವಾರಗಳಲ್ಲಿ ಭಾರತದ ಎರಡು ವಿಮಾನಗಳು ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ಇಳಿದ ಶಾರ್ಜಾ–ಹೈದರಾಬಾದ್‌ ನಡುವಿನ ಇಂಡಿಗೋ ವಿಮಾನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜುಲೈ 2022, 5:32 IST
Last Updated 17 ಜುಲೈ 2022, 5:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಹೈದರಾಬಾದ್‌: ಶಾರ್ಜಾ-ಹೈದರಾಬಾದ್ ನಡುವಿನ ಇಂಡಿಗೋ ವಿಮಾನವನ್ನು ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ.

ವಿಮಾನದಲ್ಲಿ ತಾಂತ್ರಿಕ ದೋಷವುಂಟಾಗಿರುವುದನ್ನು ಪೈಲಟ್ ಗಮನಿಸಿದ್ದರು. ಹೀಗಾಗಿ ಕರಾಚಿಯಲ್ಲಿ ವಿಮಾನವನ್ನು ಇಳಿಸಲು ಸೂಚಿಸಲಾಯಿತು. ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ವಿಮಾನಯಾನ ಸಂಸ್ಥೆ ‘ಇಂಡಿಗೋ’ ತಿಳಿಸಿದೆ.

‘ಪ್ರಯಾಣಿಕರನ್ನು ಹೈದರಾಬಾದ್‌ಗೆ ಕರೆತರಲು ಹೆಚ್ಚುವರಿ ವಿಮಾನವನ್ನು ಕರಾಚಿಗೆ ಕಳುಹಿಸಲಾಗುತ್ತಿದೆ’ ಎಂದು ಸಂಸ್ಥೆ ತಿಳಿಸಿದೆ.

ADVERTISEMENT

ದುಬೈಗೆ ತೆರಳುತ್ತಿದ್ದ ವಿಮಾನವನ್ನು ಕರಾಚಿಯತ್ತ ತಿರುಗಿಸಲಾಗಿತ್ತು. ವಿಮಾನವು ಬೆಳಗ್ಗೆ 8.03ಕ್ಕೆ ಸರಿಯಾಗಿ ಲ್ಯಾಂಡ್‌ ಆಗಿರುವುದಾಗಿ ಕರಾಚಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಹೇಳಿದೆ.

ದೆಹಲಿ-ದುಬೈ ವಿಮಾನವು ತಾಂತ್ರಿಕ ತೊಂದರೆ ಹಿನ್ನೆಲೆಯಲ್ಲಿ ಎರಡು ವಾರಗಳ ಹಿಂದೆ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.