ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹರಿಪರ್ವತದಲ್ಲಿ 24 X 36 ಅಡಿ ಅಳತೆಯ ಬೃಹತ್ ತ್ರಿವರ್ಣಧ್ವಜ ಆರೋಹಣ ಮಾಡಲಾಗಿದೆ.
75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. 100 ಅಡಿ ಎತ್ತರದಲ್ಲಿ ತ್ರಿವರ್ಣಧ್ವಜ ಹಾರಾಡುತ್ತಿರುವ ವಿಡಿಯೊವನ್ನು ‘ಎಎನ್‌ಐ’ ಟ್ವೀಟ್ ಮಾಡಿದೆ.
ಓದಿ:ಸ್ವಾತಂತ್ರ್ಯ ದಿನಾಚರಣೆ: ಸಂಪ್ರದಾಯ ಮುರಿದು ಸಿಎಂ ಬೊಮ್ಮಾಯಿ ಭಾಷಣ
‘ಇದೊಂದು ಐತಿಹಾಸಿಕ ಕ್ಷಣ. ಸೇನೆ ಮತ್ತು ಜಮ್ಮು–ಕಾಶ್ಮೀರ ಆಡಳಿತದ ಸಹಯೋಗದೊಂದಿಗೆ 100 ಅಡಿ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಾಡುವಂತೆ ಮಾಡಲಾಗಿದೆ. ಇದು ಜನರನ್ನು, ವಿಶೇಷವಾಗಿ ಜಮ್ಮು–ಕಾಶ್ಮೀರದ ಅಭಿವೃದ್ಧಿಯಲ್ಲಿ ಕೈಜೋಡಿಸುತ್ತಿರುವ ಯುವಕರಿಗೆ ಸ್ಫೂರ್ತಿ ನೀಡಲಿದೆ ಎಂದು ಮನೋಜ್ ಸಿನ್ಹಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.