ADVERTISEMENT

ಯುದ್ಧ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜುಲೈ 2022, 2:32 IST
Last Updated 21 ಜುಲೈ 2022, 2:32 IST
   

ಬೆಂಗಳೂರು: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್‌ ವಿಕ್ರಮಾದಿತ್ಯದಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಕಾರವಾರದ ನೌಕಾನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಆದರೆ ಯಾವುದೇ ಸಾವು ನೋವು ಉಂಟಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ನೌಕೆಯಲ್ಲಿದ್ದ ಸಿಬ್ಬಂದಿ ಅಗ್ನಿಶಾಮಕ ಉಪಕರಣಗಳನ್ನು ಬಳಸಿಕೊಂಡು ಬೆಂಕಿ ನಂದಿಸಿದ್ದಾರೆ ಎಂದು ಪಶ್ಚಿಮ ನೇವಿ ಕಮಾಂಡ್ ತಿಳಿಸಿದ್ದಾರೆ.

ADVERTISEMENT

ಅಗ್ನಿ ಅವಘಡ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ. ಅಲ್ಲದೆ, ಉಂಟಾಗಿರುವ ಹಾನಿಯ ಬಗ್ಗೆ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.