ADVERTISEMENT

ಕೋಲ್ಕತ್ತ: 6 ಮೀನುಗಾರರ ರಕ್ಷಣೆ, ಇನ್ನೂ ಪತ್ತೆಯಾಗದ 25 ಮಂದಿ

ಪಿಟಿಐ
Published 8 ಜುಲೈ 2019, 20:00 IST
Last Updated 8 ಜುಲೈ 2019, 20:00 IST

ಕಾಕದ್ವೀಪ,ಕೋಲ್ಕತ್ತ: ಬಂಗಾಳ ಕೊಲ್ಲಿಯ ಆಳ ಸಮುದ್ರದಲ್ಲಿ ನಾಪತ್ತೆಯಾಗಿದ್ದ 31 ಮೀನುಗಾರರ ಪೈಕಿ ಆರು ಮಂದಿಯನ್ನು ಸೋಮವಾರ ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಹವಾಮಾನ ಇಲಾಖೆ ನೀಡಿದ್ದ ಮುನ್ನೆಚ್ಚರಿಕೆಯನ್ನು ಕಡೆಗಣಿಸಿ ಇವರು ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಇನ್ನೂ 25 ಮಂದಿಯನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ’ ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೊಂದು ದೋಣಿಯಲ್ಲಿದ್ದ 13 ಮೀನುಗಾರರನ್ನು ಭಾರತ ಮತ್ತು ಬಾಂಗ್ಲಾದೇಶದ ಕರಾವಳಿ ರಕ್ಷಣಾ ಪಡೆಯವರು ರಕ್ಷಿಸಿದ್ದಾರೆ. ಶನಿವಾರದಿಂದ ಒಟ್ಟು 49 ಮೀನುಗಾರರನ್ನು ರಕ್ಷಿಸಲಾಗಿದೆ ಎಂದಿದ್ದಾರೆ.

ADVERTISEMENT

ನಾಪತ್ತೆಯಾಗಿರುವ ಮೀನುಗಾರರು 24 ದಕ್ಷಿಣ ಪರಗಣ ಜಿಲ್ಲೆಯ ನಾಮಖಾನಾದಿಂದ 4 ದೋಣಿಗಳಲ್ಲಿ ಮೀನುಗಾರಿಕೆಗೆ ತೆರಳಿದ್ದರು ಎಂದು ಮೀನುಗಾರರ ಸಂಘದ ಕಾರ್ಯದರ್ಶಿ ಬಿಜೋನ್‌ ಮೈತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.