ADVERTISEMENT

ಸ್ವಾತಂತ್ರ್ಯ ದಿನಾಚರಣೆ: ಭಾರತ –ಪಾಕ್ ಸೇನೆಯಿಂದ ಸಿಹಿ ವಿನಿಮಯ

ಪಿಟಿಐ
Published 14 ಆಗಸ್ಟ್ 2021, 12:49 IST
Last Updated 14 ಆಗಸ್ಟ್ 2021, 12:49 IST
ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯಂದು ಶನಿವಾರ ಪೂಂಚ್ ಮತ್ತು ಮೆಂಧರ್ ಪ್ರದೇಶದಲ್ಲಿ ಭಾರತೀಯ ಸೇನೆಯು ಪಾಕಿಸ್ತಾನ ಸೇನೆಯೊಂದಿಗೆ ಸಿಹಿ ಮತ್ತು ಅಭಿನಂದನೆಗಳನ್ನು ವಿನಿಮಯ ಮಾಡಿಕೊಂಡಿತು– ಪಿಟಿಐ ಚಿತ್ರ
ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯಂದು ಶನಿವಾರ ಪೂಂಚ್ ಮತ್ತು ಮೆಂಧರ್ ಪ್ರದೇಶದಲ್ಲಿ ಭಾರತೀಯ ಸೇನೆಯು ಪಾಕಿಸ್ತಾನ ಸೇನೆಯೊಂದಿಗೆ ಸಿಹಿ ಮತ್ತು ಅಭಿನಂದನೆಗಳನ್ನು ವಿನಿಮಯ ಮಾಡಿಕೊಂಡಿತು– ಪಿಟಿಐ ಚಿತ್ರ   

ಶ್ರೀನಗರ: ಪಾಕಿಸ್ತಾನದಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶನಿವಾರ ಪಾಕಿಸ್ತಾನ ಮತ್ತು ಭಾರತೀಯ ಸೇನಾ ಸಿಬ್ಬಂದಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡರು.

ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ತಂಗ್‌ಧರ್ ಸೆಕ್ಟರ್‌ನಲ್ಲಿರುವ ಚಿಲೇಹಾನಾ ತಿತ್ವಾಲ್ ಕ್ರಾಸಿಂಗ್ ಪಾಯಿಂಟ್‌ನಲ್ಲಿ ಭಾರತೀಯ ಸೇನಾ ಸಿಬ್ಬಂದಿ ಸಿಹಿತಿಂಡಿಗಳನ್ನು ಪಾಕಿಸ್ತಾನದ ಸೈನಿಕರಿಗೆ ನೀಡಿ, ಶುಭ ಕೋರಿದರು.

‘ಭಾರತೀಯ ಸೇನೆಯು ಸಿಹಿಯನ್ನು ಉಡುಗೊರೆಯಾಗಿ ನೀಡಿತು. ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿ, ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಶಾಂತಿ ಕಾಪಾಡುವ ಇಚ್ಛೆಯನ್ನು ಪ್ರದರ್ಶಿಸಿತು’ ಎಂದು ಸೇನೆಯ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ಈ ಪ್ರದೇಶದಲ್ಲಿ ಶಾಂತಿ ಕಾಪಾಡಲು ಈ ರೀತಿಯ ಸದ್ಭಾವನೆಯ ಮೂಲಕ ಭಾರತವು ಹಲವು ವರ್ಷಗಳಿಂದ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ನಿರಂತರ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

‘ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಹಳ್ಳಿಗಳಲ್ಲಿ ಶಾಂತಿ ಕಾಪಾಡುವ ಭಾರತೀಯ ಸೇನೆಯ ಪ್ರಯತ್ನಗಳನ್ನು ಜನರು ಶ್ಲಾಘಿಸಿದ್ದಾರೆ. ಭಾರತೀಯ ಸೇನೆಯ ಈ ಸಕಾರಾತ್ಮಕ ಪ್ರಯತ್ನಗಳು ನಿಯಂತ್ರಣ ರೇಖೆಯ ಉದ್ದಕ್ಕೂ ಸುದೀರ್ಘ ಶಾಂತಿಗೆ ಕಾರಣವಾಗುತ್ತವೆ’ ಎಂದು ಅಧಿಕಾರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.