ವಿಮಾನ ( ಸಾಂಕೇತಿಕ ಚಿತ್ರ)
ನವದೆಹಲಿ: ಅಫ್ಗಾನಿಸ್ತಾನದಲ್ಲಿ ಭಾರತದ ವಿಮಾನ ಅಪಘಾತಕ್ಕೀಡಾಗಿಲ್ಲ ಎಂದು ಭಾರತೀಯ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.
ಭಾರತದಿಂದ ಮಾಸ್ಕೊಗೆ ತೆರಳುತ್ತಿದ್ದ ವಿಮಾನವೊಂದು ಅಫ್ಗಾನಿಸ್ತಾನದ ಬಡಾಖಾನ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಅಫ್ಗಾನ್ ಮಾಧ್ಯಮಗಳು ರಾತ್ರಿ ವರದಿ ಮಾಡಿದ್ದವು.
ಈ ವರದಿಗಳನ್ನು ಭಾರತೀಯ ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಅಲ್ಲಿ ಭಾರತದ ಯಾವುದೇ ವಿಮಾನ ಪತನವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ
ಶನಿವಾರ ರಾತ್ರಿ ಅಫ್ಗಾನಿಸ್ತಾನದಲ್ಲಿ ಭಾರತೀಯ ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಗಳು ಬಂದ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.