ADVERTISEMENT

ಒಳ್ಳೆಯ ಜನರು ರಾಜಕೀಯದಿಂದ ದೂರ ಸರಿಯುತ್ತಿದ್ದಾರೆ: ಮಾಜಿ ರಾಷ್ಟ್ರಪತಿ ಕೋವಿಂದ್

ಪಿಟಿಐ
Published 2 ಅಕ್ಟೋಬರ್ 2025, 9:58 IST
Last Updated 2 ಅಕ್ಟೋಬರ್ 2025, 9:58 IST
<div class="paragraphs"><p>ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್ ಮತ್ತು&nbsp;ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್</p></div>

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್ ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್

   

–ಪಿಟಿಐ ಚಿತ್ರ

ನಾಗ್ಪುರ: ಒಳ್ಳೆಯ ಜನರು ರಾಜಕೀಯದಿಂದ ದೂರ ಸರಿಯುತ್ತಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ಯುವಕರು ದೇಶದ ರಾಜಕೀಯದ ಭಾಗವಾಗಬೇಕೆಂದು ಒತ್ತಾಯಿಸಿದ್ದಾರೆ.

ADVERTISEMENT

ನಾಗ್ಪುರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಾರ್ಷಿಕ ವಿಜಯದಶಮಿ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನನ್ನ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದು ಹೇಳಿದ್ದಾರೆ.

‘ಅಂಬೇಡ್ಕರ್ ಮತ್ತು ಹೆಡ್ಗೆವಾರ್ ಹಂಚಿಕೊಂಡ ರಾಷ್ಟ್ರೀಯ ಏಕತೆ ಮತ್ತು ಸಾಮಾಜಿಕ ಸಾಮರಸ್ಯದ ಮೌಲ್ಯಗಳಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ಆರ್‌ಎಸ್‌ಎಸ್‌ನಲ್ಲಿ ಯಾವುದೇ ಜಾತಿವಾದ ಮತ್ತು ತಾರತಮ್ಯವಿಲ್ಲ’ ಎಂದು ಕೋವಿಂದ್ ಪ್ರತಿಪಾದಿಸಿದ್ದಾರೆ.

ಆರ್‌ಎಸ್‌ಎಸ್ ಸಂಸ್ಥಾಪಕರ ಆಲೋಚನೆಗಳು ಸಮಾಜ ಮತ್ತು ರಾಷ್ಟ್ರವನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡಿದೆ. ಒಳ್ಳೆಯವರು ರಾಜಕೀಯದಿಂದ ದೂರ ಸರಿಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯುವಕರು ದೇಶದ ರಾಜಕೀಯದ ಭಾಗವಾಗಬೇಕೆಂದು ಅವರು ಮನವಿ ಮಾಡಿದ್ದಾರೆ.

ದೇಶದ ರಾಜಕೀಯ ವಿದ್ಯಮಾನಗಳ ಕುರಿತು ‘ಟ್ರಯಂಫ್ ಆಫ್ ದಿ ಇಂಡಿಯನ್ ರಿಪಬ್ಲಿಕ್’ ಎಂಬ ಪುಸ್ತಕವನ್ನು ಬರೆಯುತ್ತಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.