ADVERTISEMENT

ನಾಪತ್ತೆಯಾಗಿದ್ದ ದೆಹಲಿ ವಿ.ವಿ. ವಿದ್ಯಾರ್ಥಿನಿ ಯಮುನಾ ನದಿಯಲ್ಲಿ​ ಶವವಾಗಿ ಪತ್ತೆ

ಪಿಟಿಐ
Published 14 ಜುಲೈ 2025, 5:04 IST
Last Updated 14 ಜುಲೈ 2025, 5:04 IST
<div class="paragraphs"><p>ಯಮುನಾ ನದಿ</p></div>

ಯಮುನಾ ನದಿ

   

ನವದೆಹಲಿ: ಆರು ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಸ್ನೇಹಾ ದೇಬ್ನಾಥ್ (19) ಮೃತದೇಹವು ಯಮುನಾ ನದಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಪರ್ಯಾವರಣ್ ಕಾಂಪ್ಲೆಕ್ಸ್ ನಿವಾಸಿ ಸ್ನೇಹಾ, ತ್ರಿಪುರಾ ಮೂಲದವರು. ಜುಲೈ 7ರಂದು ಅವರು ನಾಪತ್ತೆಯಾಗಿದ್ದಾರೆ ಎಂದು ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಸ್ನೇಹಾಗಾಗಿ ಹುಡುಕಾಟ ಆರಂಭಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

ಸಿಸಿಟಿವಿ ದೃಶ್ಯವಳಿಗಳನ್ನು ಪರಿಶೀಲನೆ ನಡೆಸಿ, ತನಿಖೆಯನ್ನು ಚುರುಕುಗೊಳಿಸಲಾಗಿತ್ತು. ಸ್ನೇಹಾ ಕೊನೆದಾಗಿ ಕಾಣಿಸಿಕೊಂಡ ಸ್ಥಳವನ್ನು ಪತ್ತೆ ಹಚ್ಚಲಾಯಿತು. ದೇಬ್ನಾಥ್ ಕ್ಯಾಬ್‌ನಲ್ಲಿ ಬಂದು ಸಿಗ್ನೇಚರ್ ಬ್ರಿಡ್ಜ್ ಇಳಿದುಕೊಂಡಿದ್ದನ್ನು ಪ್ರತ್ಯಕ್ಷದರ್ಶಿಯೊಬ್ಬರು ನೋಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಯಮುನಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸಿಗ್ನೇಚರ್ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಾ ಬರೆದಿಟ್ಟ ಡೆತ್‌ನೋಟ್‌ ಪತ್ತೆಯಾಗಿತ್ತು ಎಂದೂ ಪೊಲೀಸರು ಹೇಳಿದ್ದಾರೆ.

ನಿಗಮ್ ಬೋಧ್ ಘಾಟ್‌ನಿಂದ ನೋಯ್ಡಾವರೆಗಿನ ಯಮುನಾ ನದಿಯ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಸ್ಥಳಗಳನ್ನು ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಪೊಲೀಸರ ಸಹಾಯದಿಂದ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು.

ಇತ್ತೀಚೆಗೆ ಯುವತಿ ಕಾಣೆಯಾಗಿದ್ದರ ಸಂಬಂಧ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು. ಈ ಪ್ರಕರಣ ಸಂಬಂಧ ಶೀಘ್ರ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.