ಪ್ರಮೀಳ ತಾಯಿ ಮೇಢೆ
ನಾಗಪುರ: ರಾಷ್ಟ್ರ ಸೇವಿಕಾ ಸಮಿತಿಯ ನಾಲ್ಕನೇ ಪ್ರಮುಖ ಸಂಚಾಲಿಕರಾಗಿದ್ದ ಪ್ರಮೀಳ ತಾಯಿ ಮೇಢೆ ಗುರುವಾರ ಬೆಳಿಗ್ಗೆ ನಿಧನರಾದರು.
ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೂರು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ 15 ದಿನಗಳಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು ಎಂದು ರಾಷ್ಟ್ರ ಸೇವಿಕಾ ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆ.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಷ್ಟ್ರ ಸೇವಿಕಾ ಸಮಿತಿ ಮುಖ್ಯಸ್ಥೆ ಶಾಂತಕ್ಕ ಅವರು ಪ್ರಮೀಳ ತಾಯಿ ಮೇಢೆ ಅವರ ಪಾರ್ಥೀವ ಶರೀರಕ್ಕೆ ಗೌರವ ನಮನ ಸಲ್ಲಿಸಿದ್ದಾರೆ.
ರಾಷ್ಟ್ರ ನಿರ್ಮಾಣ ಮತ್ತು ಸೇವೆಗೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಐದು ದಶಕಗಳ ಕಾಲ ತಮ್ಮ ಬದುಕನ್ನು ದೇಶ ಹಾಗೂ ಸಮಾಜ ಸೇವೆಗೆ ಅರ್ಪಣೆ ಮಾಡಿದ್ದರು. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರು ದೇಹವನ್ನೂ ದಾನವನ್ನು ಮಾಡಿದ್ದಾರೆ.
'ಮೌಸಿ' (ಪ್ರಮೀಳ ತಾಯಿ ಮೇಢೆ) ಅವರ ನಿಧನದ ಸುದ್ದಿ ಕೇಳಿ ನನಗೆ ತುಂಬಾ ದುಃಖವಾಯಿತು. ಅವರಿಗೆ ಹೃದಯಪೂರ್ವಕ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ಇಡೀ ಜೀವನ ದೇಶಭಕ್ತಿ ಮತ್ತು ಮಹಿಳೆಯರ ಜಾಗೃತಿಗೆ ಮೀಸಲಾಗಿತ್ತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.