ADVERTISEMENT

Covid-19 India Update| ಸಕ್ರಿಯ ಪ್ರಕರಣಗಳು ಶೇ 2ಕ್ಕಿಂತ ಕಡಿಮೆ

ಪಿಟಿಐ
Published 17 ಜನವರಿ 2021, 9:21 IST
Last Updated 17 ಜನವರಿ 2021, 9:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,08,826ರಷ್ಟಿದ್ದು, ಒಟ್ಟಾರೆ ಶೇಕಡ 2ಕ್ಕಿಂತ ಕಡಿಮೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೈನಂದಿನ ಪ್ರಕರಣಗಳಲ್ಲಿ ಇಳಿಕೆಯಾಗಿರುವುದರಿಂದಾಗಿ ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ ಎಂದು ಸಚಿವಾಲಯ ಹೇಳಿದೆ.

ದೇಶದಲ್ಲಿ ಕಳೆದ 10 ದಿನಗಳಿಂದ 20,000 ಕ್ಕೂ ಕಡಿಮೆ ದೈನಂದಿನ ಪ್ರಕರಣಗಳು ವರದಿಯಾಗುತ್ತಿವೆ. ಅಲ್ಲದೆ ಚೇತರಿಕೆ ಪ್ರಮಾಣವು, ಸಕ್ರಿಯ ಪ್ರಕರಣಗಳಿಕ್ಕಿಂತ ಹೆಚ್ಚಿದೆ. ದೇಶದಲ್ಲಿ ಈವರೆಗೆ ಒಟ್ಟು 10,196,885 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ದೇಶದಲ್ಲಿ ಕಳೆದ 23 ದಿನಗಳಲ್ಲಿಸೋಂಕಿನಿಂದಾಗಿ ಪ್ರತಿನಿತ್ಯ 300ಕ್ಕಿಂತ ಕಡಿಮೆ ಜನರು ಸಾವಿಗೀಡಾಗಿದ್ಧಾರೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,144 ಹೊಸ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಭಾನುವಾರ ಒಟ್ಟು ಪ್ರಕರಣಗಳ ಸಂಖ್ಯೆ 1,05,57,985ಕ್ಕೆ ಏರಿಕೆಯಾಗಿದೆ. ಚೇತರಿಕೆಯ ಒಟ್ಟು ಪ್ರಮಾಣವು ಶೇಕಡ 96.58ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.