ADVERTISEMENT

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಸತತ ಎರಡನೇ ದಿನವೂ 7.5 ಲಕ್ಷಕ್ಕಿಂತ ಕಡಿಮೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 8:25 IST
Last Updated 21 ಅಕ್ಟೋಬರ್ 2020, 8:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕೋವಿಡ್–19 ಸಕ್ರಿಯ ಪ್ರಕರಣಗಳ ಸಂಖ್ಯೆ ಸತತ ಎರಡನೇ ದಿನವೂ 7.5 ಲಕ್ಷಕ್ಕಿಂತ ಕಡಿಮೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದು ದೇಶದಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಇಳಿಕೆಯಾಗುತ್ತಿರುವುದರ ಸೂಚಕ. ಸಾವಿನ ಪ್ರಮಾಣವೂ ಶೇ 1.51ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ಟ್ವೀಟ್ ಮಾಡಿದೆ.

ಕೋವಿಡ್‌ ಮರಣ ಪ್ರಮಾಣವನ್ನು ಶೇ 1ಕ್ಕಿಂತ ಕಡಿಮೆಯೇ ಇರುವಂತೆ ನೋಡಿಕೊಳ್ಳಬೇಕೆಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಸದ್ಯ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ಸಾವಿನ ಪ್ರಮಾಣ ಶೇ 1ಕ್ಕಿಂತಲೂ ಕಡಿಮೆ ಇದೆ.

ADVERTISEMENT

ಪ್ರತಿ ದಿನ ಹೊಸದಾಗಿ ಪತ್ತೆಯಾಗುವ ಸೋಂಕಿತರ ಸಂಖ್ಯೆಯೂ ಸತತ ಮೂರು ದಿನಗಳಿಂದ 60 ಸಾವಿರಕ್ಕಿಂತ ಕಡಿಮೆ ಇದೆ. ಕಳೆದ 5 ದಿನಗಳಿಂದ ಸಕ್ರಿಯ ಪ್ರಕರಣಗಳು 8 ಲಕ್ಷಕ್ಕಿಂತ ಕಡಿಮೆ ಇದೆ ಎಂದೂ ಸಚಿವಾಲಯ ತಿಳಿಸಿದೆ.

ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿದೇಶದಾದ್ಯಂತ 54,044 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 717 ಮಂದಿ ಮೃತಪಟ್ಟಿದ್ದು, 61,775 ಜನ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.