ADVERTISEMENT

Covid-19 India Update: 60 ಲಕ್ಷ ದಾಟಿದ ಒಟ್ಟು ಪ್ರಕರಣಗಳು

ಏಜೆನ್ಸೀಸ್
Published 28 ಸೆಪ್ಟೆಂಬರ್ 2020, 5:18 IST
Last Updated 28 ಸೆಪ್ಟೆಂಬರ್ 2020, 5:18 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್‌ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ   

ಬೆಂಗಳೂರು: ದೇಶದಾದ್ಯಂತ ಕೋವಿಡ್‌ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 60 ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 82,170 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 1,039 ಮಂದಿ ಮೃತಪಟ್ಟಿದ್ದಾರೆ.

ಒಟ್ಟು 60,74,703 ಪ್ರಕರಣಗಳ ಪೈಕಿ 9,62,640 ಸಕ್ರಿಯ ಪ್ರಕರಣಗಳಿದ್ದು, 50,16,521 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 95,542 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸೆಪ್ಟೆಂಬರ್‌ 27ರ ವರೆಗೂ ದೇಶದಲ್ಲಿ 7,19,67,230 ಗಂಟಲು ಮಾದರಿಗಳಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಭಾನುವಾರ ಒಂದೇ ದಿನ 7,09,394 ಕೋವಿಡ್‌ ಪರೀಕ್ಷೆಗಳನ್ನು ಮಾಡಿರುವುದಾಗು ಐಸಿಎಂಆರ್‌ ತಿಳಿಸಿದೆ.

ADVERTISEMENT

ಮಹಾರಾಷ್ಟ್ರದಲ್ಲಿ 2,73,646 ಸಕ್ರಿಯ ಪ್ರಕರಣಗಳು, ಕರ್ನಾಟಕದಲ್ಲಿ 1,04,743 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 64,876 ಹಾಗೂ ಉತ್ತರ ಪ್ರದೇಶದಲ್ಲಿ 55,603 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.