ADVERTISEMENT

Covid-19 India Update: 24 ಗಂಟೆಗಳಲ್ಲಿ 86,821 ಹೊಸ ಪ್ರಕರಣಗಳು

ಏಜೆನ್ಸೀಸ್
Published 1 ಅಕ್ಟೋಬರ್ 2020, 4:15 IST
Last Updated 1 ಅಕ್ಟೋಬರ್ 2020, 4:15 IST
ಹೈದರಾಬಾದ್‌ನಲ್ಲಿ ಆಶಾ ಕಾರ್ಯಕರ್ತರು ಕೋವಿಡ್‌ ಪರೀಕ್ಷೆ ನೋಂದಣಿ ಕಾರ್ಯದಲ್ಲಿರುವುದು
ಹೈದರಾಬಾದ್‌ನಲ್ಲಿ ಆಶಾ ಕಾರ್ಯಕರ್ತರು ಕೋವಿಡ್‌ ಪರೀಕ್ಷೆ ನೋಂದಣಿ ಕಾರ್ಯದಲ್ಲಿರುವುದು   

ಬೆಂಗಳೂರು: ದೇಶದಾದ್ಯಂತ ಕೋವಿಡ್‌ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 63 ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 86,821 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 1,181 ಮಂದಿ ಮೃತಪಟ್ಟಿದ್ದಾರೆ.

ಒಟ್ಟು 63,12,585 ಪ್ರಕರಣಗಳ ಪೈಕಿ 9,40,705 ಸಕ್ರಿಯ ಪ್ರಕರಣಗಳಿದ್ದು, 52,73,202 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 98,678 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸೆಪ್ಟೆಂಬರ್‌ 30ರ ವರೆಗೂ ದೇಶದಲ್ಲಿ 7,56,19,781 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಬುಧವಾರ ಒಂದೇ ದಿನ 14,23,052 ಕೋವಿಡ್‌ ಪರೀಕ್ಷೆಗಳನ್ನು ನಡೆಸಿರುವುದಾಗಿ ಐಸಿಎಂಆರ್‌ ತಿಳಿಸಿದೆ.

ADVERTISEMENT

ಮಹಾರಾಷ್ಟ್ರದಲ್ಲಿ 2,59,462 ಸಕ್ರಿಯ ಪ್ರಕರಣಗಳು, ಕರ್ನಾಟಕದಲ್ಲಿ 1,07,635 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 58,445 ಹಾಗೂ ಉತ್ತರ ಪ್ರದೇಶದಲ್ಲಿ 50,883 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಸಚಿವಾಲಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.