ADVERTISEMENT

Covid-19 India Update: ಕೇರಳದಲ್ಲಿ ಸೋಂಕು ಹೆಚ್ಚಳ, 10,606 ಹೊಸ ಪ್ರಕರಣಗಳು

ಏಜೆನ್ಸೀಸ್
Published 7 ಅಕ್ಟೋಬರ್ 2020, 16:26 IST
Last Updated 7 ಅಕ್ಟೋಬರ್ 2020, 16:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೇರಳದಲ್ಲಿ ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ ಹತ್ತು ಸಾವಿರದ ಗಡಿ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 92,161 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ ಈವರೆಗೂ 1,60,253 ಮಂದಿ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 14,578 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 16,715 ಗುಣಮುಖರಾಗಿದ್ದಾರೆ ಹಾಗೂ 355 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 2,44,527 ಸಕ್ರಿಯ ಪ್ರಕರಣಗಳಿವೆ.

ಇನ್ನೂ ಕರ್ನಾಟಕದಲ್ಲಿ 10,947 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 5,120 ಪ್ರಕರಣಗಳು, ತಮಿಳುನಾಡಿನಲ್ಲಿ 5,447 ಹಾಗೂ ಪಶ್ಚಿಮ ಬಂಗಾಳದಲ್ಲಿ 3,455 ಹೊಸ ಪ್ರಕರಣಗಳು ವರದಿಯಾಗಿವೆ.

ADVERTISEMENT

ಬುಧವಾರ ಬೆಳಗ್ಗಿನ ವರೆಗೂ ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 72,049 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 986 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆಯಾಗಿದ್ದು, 1,04,555 ಮಂದಿ ಮೃತಪಟ್ಟಿದ್ದಾರೆ.

ಗುಣಮುಖರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈವರೆಗೆ 57,44,694 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳು ಇವೆ.

ಅಕ್ಟೋಬರ್ 7ರ ವರೆಗೆ ಒಟ್ಟು 8,22,71,654 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 11,99,857 ಮಾದರಿಗಳನ್ನು ಮಂಗಳವಾರ ಪರೀಕ್ಷಿಸಲಾಯಿತು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.