ADVERTISEMENT

India Covid-19 Update: 1,150 ಹೊಸ ಪ್ರಕರಣ, 11,558 ಸಕ್ರಿಯ ಪ್ರಕರಣಗಳು

ಐಎಎನ್ಎಸ್
Published 17 ಏಪ್ರಿಲ್ 2022, 8:12 IST
Last Updated 17 ಏಪ್ರಿಲ್ 2022, 8:12 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ 1,150 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ ಮೃತಪಟ್ಟವರ ಸಂಖ್ಯೆ 5,21,751ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ನಿನ್ನೆ(ಶನಿವಾರ) 24 ಗಂಟೆಗಳಲ್ಲಿ 975 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದವು.

ಸದ್ಯ ದೇಶದಲ್ಲಿ 11,558 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಪಾಸಿಟಿವ್ ಪ್ರಕರಣಗಳ ಪೈಕಿ ಶೇ 0.03 ರಷ್ಟಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 0.31 ರಷ್ಟಿದೆ.

ADVERTISEMENT

24 ಗಂಟೆಗಳ ಅವಧಿಯಲ್ಲಿ 954 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,25,08,788 ಜನರು ಗುಣಮುಖರಾಗಿದ್ದಾರೆ. ದೇಶದ ಚೇತರಿಕೆ ಪ್ರಮಾಣ ಶೇ 98.76ರಷ್ಟಿದೆ.

ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 3,65,118 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ 83.18 ಕೋಟಿಗೂ ಅಧಿಕ ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ.

ಭಾನುವಾರ ಬೆಳಗ್ಗೆ 7 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೇಶದಾದ್ಯಂತ ಈವರೆಗೆ 186.04 ಕೋಟಿ ಕೋವಿಡ್-19 ವಿರುದ್ಧದ ಲಸಿಕಾ ಡೋಸ್ ಅನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.