ADVERTISEMENT

ಕೋವಿಡ್‌: ದೇಶದಲ್ಲಿ 10 ದಿನಗಳಲ್ಲಿ ದುಪ್ಪಟ್ಟು ಪ್ರಕರಣ

ಏಜೆನ್ಸೀಸ್
Published 15 ಏಪ್ರಿಲ್ 2021, 7:54 IST
Last Updated 15 ಏಪ್ರಿಲ್ 2021, 7:54 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆವರೆಗಿನ ಕಳೆದ 24 ಗಂಟೆ ಅವಧಿಯಲ್ಲಿ ಎರಡು ಲಕ್ಷ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ.

ಏಪ್ರಿಲ್‌ ಆರಂಭದಿಂದ ಹೊಸ ಪ್ರಕರಣಗಳು ದುಪ್ಪಟ್ಟಾಗುತ್ತಿವೆ. ಇದರಿಂದ, ಇದುವರೆಗೆ ಸೋಂಕು ಪ್ರಕರಣಗಳ ಸಂಖ್ಯೆ ಒಟ್ಟು 1.41 ಕೋಟಿಗೆ ಏರಿಕೆಯಾಗಿದೆ.

ದೇಶದಲ್ಲಿ ಮತ್ತೆ 1,038 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದ ಸಾವಿಗೀಡಾದವರ ಸಂಖ್ಯೆ 1.75 ಲಕ್ಷಕ್ಕೆ ಹೆಚ್ಚಳವಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ADVERTISEMENT

ಬ್ರೆಜಿಲ್‌ಗಿಂತಲೂ ಭಾರತದಲ್ಲಿ ಈಗ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕೋವಿಡ್‌–19 ಪ್ರಕರಣಗಳ ಸಂಖ್ಯೆಯಲ್ಲಿ ಭಾರತ ಈಗ ಎರಡನೇ ಸ್ಥಾನದಲ್ಲಿದೆ.

ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನಿರ್ಲಕ್ಷ್ಯ, ಧಾರ್ಮಿಕ ಹಬ್ಬಗಳು, ರಾಜಕೀಯ ರ‍್ಯಾಲಿಗಳು ಮುಂತಾದ ಕಾರಣಗಳಿಂದ ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗಿವೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. ಇದೇ ತಿಂಗಳಲ್ಲಿ ಸುಮಾರು ಇಪತ್ತು ಲಕ್ಷದಷ್ಟು ಪ್ರಕರಣಗಳು ಪತ್ತೆಯಾಗಿವೆ.

ಕಳೆದ ವರ್ಷ ಲಾಕ್‌ಡೌನ್‌ ವಿಧಿಸಿದ್ದರಿಂದ ಅಪಾರ ಆರ್ಥಿಕ ಸಂಕಷ್ಟ ಎದುರಿಸಬೇಕಾಯಿತು. ಹೀಗಾಗಿ, ಕೇಂದ್ರ ಸರ್ಕಾರ ಎರಡನೇ ಬಾರಿ ಲಾಕ್‌ಡೌನ್‌ ಹೇರಲು ಆಸಕ್ತಿ ತೋರುತ್ತಿಲ್ಲ. ಆದರೆ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳು ಕಠಿಣ ನಿರ್ಬಂಧ ವಿಧಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.