ಅಮಿತ್ ಶಾ (ಸಂಗ್ರಹ ಚಿತ್ರ)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶದ ಅಭಿವೃದ್ಧಿಯ ಪಯಣವು ಯಾವುದೇ ಅಡೆತಡೆಯಿಲ್ಲದೆ ಸಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್‘ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಭಾರತೀಯ ಸಂಸ್ಕೃತಿಯ ಕೇಂದ್ರವಾದ ವಾರಾಣಸಿಯಿಂದ ಸತತ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿರುವುದಕ್ಕೆ ಪ್ರಧಾನಿ ಅವರಿಗೆ ಅಭಿನಂದನೆಗಳು. ಈ ಬಾರಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಲು ವಾರಾಣಸಿಯ ಜನರು ಆಶೀರ್ವದಿಸಲಿದ್ದಾರೆ‘ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ಮಾತ್ರವಲ್ಲದೇ ಇಡೀ ಭಾರತವನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ. ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರಧಾನಿ ಮೋದಿ ಅವರು ಹೆಚ್ಚಿಸಿದ್ದಾರೆ ಎಂದು ಹೇಳಿದ್ದಾರೆ.
ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಅವಧಿಗೆ ಪ್ರಧಾನಿ ಮೋದಿ ಇಂದು (ಮಂಗಳವಾರ) ನಾಮಪತ್ರ ಸಲ್ಲಿಸಿದರು. ಈ ವೇಳೆ ಎನ್‌ಡಿಎ ಮೈತ್ರಿಕೂಟದ ಹಲವು ನಾಯಕರು ಸೇರಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಥ್ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.