ADVERTISEMENT

ನಾಳೆಯಿಂದ ಭಾರತಕ್ಕೆ ಭದ್ರತಾ ಮಂಡಳಿಯ ಅಧ್ಯಕ್ಷತೆ

ಪಿಟಿಐ
Published 30 ನವೆಂಬರ್ 2022, 14:31 IST
Last Updated 30 ನವೆಂಬರ್ 2022, 14:31 IST

ವಿಶ್ವಸಂಸ್ಥೆ (ಪಿಟಿಐ): ಡಿಸೆಂಬರ್‌ ಒಂದರಿಂದ ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸುತ್ತಿರುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ ಅವರು, ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್‌ ಮತ್ತು ಸಾಮಾನ್ಯ ಸಭೆ ಅಧ್ಯಕ್ಷ ಶಾಬಾ ಕೊರೊಶಿ ಅವರನ್ನು ಭೇಟಿ ಮಾಡಿ, ಭಾರತದ ಆದ್ಯತೆಗಳ ಕುರಿತುಚರ್ಚೆ ನಡೆಸಿದರು.

ಭಾರತದ ಅಧ್ಯಕ್ಷೀಯ ಅವಧಿಯು ಡಿ.31ಕ್ಕೆ ಮುಕ್ತಾಯವಾಗಲಿದೆ. ಈ ಸಂದರ್ಭದಲ್ಲಿ ಭಯೋತ್ಪಾದನೆ ನಿಗ್ರಹ ಮತ್ತು ಬಹುಪಕ್ಷೀಯ ಸಂಬಂಧಗಳ ಸುಧಾರಣೆಯು ದೇಶದ ಆದ್ಯತೆಯಾಗಿರಲಿದೆ. ಇದಕ್ಕೂ ಮೊದಲು ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರತವು ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT