
ಪಿಟಿಐ
ತಿರುವನಂತಪುರ: ದೇಶದ ಮೊದಲ ಮಂಕಿಪಾಕ್ಸ್ ಸೋಂಕು ಬಾಧಿತ ಕೇರಳದ ವ್ಯಕ್ತಿ ಗುಣಮುಖರಾಗಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ತಿಳಿಸಿದ್ದಾರೆ.
ಕೊಲ್ಲಂನ 35 ವರ್ಷದ ವ್ಯಕ್ತಿಗೆ ತಿರುವನಂತಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದೂ ಹೇಳಿದ್ದಾರೆ.
ರಾಷ್ಟ್ರೀಯ ವೈರಾಣು ಸಂಸ್ಥೆಯ (ಎನ್‌ಐವಿ) ಸೂಚನೆಯಂತೆ ಪರೀಕ್ಷೆ ನಡೆಸಿ ವ್ಯಕ್ತಿಯು ಸೋಂಕು ಮುಕ್ತನಾಗಿರುವುದನ್ನು ದೃಢಪಡಿಸಲಾಗಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.