ನರೇಂದ್ರ ಮೋದಿ
ನವದೆಹಲಿ (ಪಿಟಿಐ): ಭಾರತದ ಚೊಚ್ಚಲ ಮಾನವಸಹಿತ ಬಾಹ್ಯಾಕಾಶ ಗಗನಯಾನವನ್ನು 2027ರ ಆರಂಭದಲ್ಲಿ ಮಾಡುವ ನಿರೀಕ್ಷೆಯಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ತಿಳಿಸಿದರು.
‘2035ರ ವೇಳೆಗೆ ಭಾರತದಲ್ಲಿ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸುವ ಮತ್ತು 2040ರ ವೇಳೆಗೆ ಚಂದ್ರನ ಬಳಿ ಗಗನಯಾತ್ರಿಗಳನ್ನು ಕಳುಹಿಸುವ ಯೋಜನೆಗಳನ್ನು ಪಟ್ಟಿ ಮಾಡಲಾಗಿದೆ’ ಎಂದು ಜಾಗತಿಕ ಬಾಹ್ಯಾಕಾಶ ಅನ್ವೇಷಣೆ ಸಮ್ಮೇಳನಕ್ಕೆ ನೀಡಿದ ಧ್ವನಿಮುದ್ರಿತ ಸಂದೇಶದಲ್ಲಿ ಮೋದಿ ತಿಳಿಸಿದ್ದಾರೆ.
‘ಭಾರತದ ಬಾಹ್ಯಾಕಾಶ ಪ್ರಯಾಣವು ಇತರರೊಂದಿಗೆ ಸ್ಪರ್ಧಿಸುವುದಲ್ಲ. ಬದಲಿಗೆ, ಒಟ್ಟಾಗಿ ಎತ್ತರಕ್ಕೆ ತಲುಪುವುದು. ಭಾರತ ಶೀಘ್ರದಲ್ಲೇ ಜಿ 20 ಉಪಗ್ರಹವನ್ನು ಉಡಾವಣೆ ಮಾಡಲಿದೆ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.