ಲಖನೌ(ಪಿಟಿಐ): ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬುಧವಾರ ಮತ್ತೊಂದು ಚೀತಾ ಮೃತಪಟ್ಟಿರುವ ಬೆನ್ನಲ್ಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ವರ್ಚಸ್ಸು ಹಾಳಾಗುತ್ತಿದೆ’ ಎಂದು ಹೇಳಿದ್ದಾರೆ.
ಕುನೊ ಉದ್ಯಾನದಲ್ಲಿ ‘ಧಾತ್ರಿ’ ಎಂಬ ಹೆಣ್ಣು ಚೀತಾದ ಮೃತದೇಹ ಬುಧವಾರ ಬೆಳಿಗ್ಗೆ ದೊರೆತಿತ್ತು. ಇದರ ಸಾವಿನ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ. ಮಾರ್ಚ್‌ನಿಂದ ಇಲ್ಲಿಯವರೆಗೆ ಉದ್ಯಾನದಲ್ಲಿರುವ ಒಟ್ಟು ಚೀತಾಗಳ ಪೈಕಿ ಒಂಬತ್ತು ಸಾವಿಗೀಡಾಗಿವೆ.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅಖಿಲೇಶ್ ಅವರು, ‘ಈ ಚೀತಾಗಳ ಸಾವಿಗೆ ಯಾರು ಜವಾಬ್ದಾರರು? ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಚೀತಾಗಳನ್ನು ಕರೆತಂದು ಬಿಡುವ ಕಾರ್ಯಕ್ರಮದ ಪ್ರಚಾರದಲ್ಲಿ ನಿರತರಾಗಿದ್ದವರೆಲ್ಲರೂ ಈಗ ಎಲ್ಲಿದ್ದಾರೆ?’ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.