ADVERTISEMENT

ಭಾರತದಲ್ಲಿ ತಾಯಂದಿರ ಮರಣ ಪ್ರಮಾಣ ಗಣನೀಯ ಇಳಿಕೆ: ಕೇಂದ್ರ ಆರೋಗ್ಯ ಸಚಿವ ನಡ್ಡಾ

ಪಿಟಿಐ
Published 23 ಡಿಸೆಂಬರ್ 2025, 14:44 IST
Last Updated 23 ಡಿಸೆಂಬರ್ 2025, 14:44 IST
ಜೆ.ಪಿ.ನಡ್ಡಾ
ಜೆ.ಪಿ.ನಡ್ಡಾ   

ಧಾರ್‌ (ಮಧ್ಯ‍ಪ್ರದೇಶ): ಭಾರತದಲ್ಲಿ ಆರೋಗ್ಯ ಸಂಸ್ಥೆಗಳಿಗೆ ಬಂದು ಹೆರಿಗೆ ಮಾಡಿಸಿಕೊಳ್ಳುವವರ ಪ್ರಮಾಣ ಶೇ 89ರಷ್ಟು ಹೆಚ್ಚಾಗಿದೆ. ಹೀಗಾಗಿ ತಾಯಂದಿರ ಮರಣ ಪ್ರಮಾಣದಲ್ಲಿ (ಎಂಎಂಆರ್‌) ಗಣನೀಯ ಇಳಿಕೆ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮಂಗಳವಾರ ಹೇಳಿದ್ದಾರೆ.

ಧಾರ್‌ ಜಿಲ್ಲೆಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ (ಪಿಪಿಪಿ) ನಿರ್ಮಿಸಲಾಗುತ್ತಿರುವ ವೈದ್ಯಕೀಯ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಿ, ನಡ್ಡಾ ಈ ಹೇಳಿಕೆ ನೀಡಿದರು.

ಅಲ್ಲದೇ, ನಾಗರಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಿಕೊಡಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶ್ರಮಿಸುತ್ತಿದೆ. ಇದಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.