ADVERTISEMENT

ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿ ಅಧಿಸೂಚನೆ

ರಾಯಿಟರ್ಸ್
Published 24 ಮಾರ್ಚ್ 2023, 9:27 IST
Last Updated 24 ಮಾರ್ಚ್ 2023, 9:27 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ಗುಜರಾತ್‌ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ.

ಇದನ್ನೂ ಓದಿ: ಅಂದು ಕೋಲಾರದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?

2019ರ ಲೋಕಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್‌ ಅವರು, ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ 'ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ' ಎಂದು ಪ್ರಶ್ನಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.