ADVERTISEMENT

Axiom-4 Mission: ನಾಳೆ ಶುಭಾಂಶು ಐಎಸ್‌ಎಸ್‌ನತ್ತ

ಪಿಟಿಐ
Published 24 ಜೂನ್ 2025, 2:39 IST
Last Updated 24 ಜೂನ್ 2025, 2:39 IST
   

ನವದೆಹಲಿ: ‘ಆ್ಯಕ್ಸಿಯಂ–4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಜೂನ್‌ 25ರಂದು ಮಧ್ಯಾಹ್ನ 12.01ಕ್ಕೆ (ಭಾರತೀಯ ಕಾಲಮಾನ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಪ್ರಯಾಣ ಬೆಳೆಸುವರು ಎಂದು ನಾಸಾ ಮಂಗಳವಾರ ಘೋಷಿಸಿದೆ.

‘ಶುಭಾಂಶು ಶುಕ್ಲಾ ಅಲ್ಲದೆ, ಹಂಗರಿ ಮತ್ತು ಪೋಲೆಂಡ್‌ನ ಗಗನಯಾತ್ರಿಗಳಿರುವ ಗಗನನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್‌–9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಚಿಮ್ಮಲಿದೆ’ ಎಂದು ಹೇಳಿದೆ.

‘ನಾಸಾ, ಆ್ಯಕ್ಸಿಯಂ ಸ್ಪೇಸ್‌ ಹಾಗೂ ಇಲಾನ್‌ ಮಸ್ಕ್‌ ಒಡೆತನ ಸ್ಪೇಸ್‌ಎಕ್ಸ್‌ ಜಂಟಿಯಾಗಿ ಈ ಬಾಹ್ಯಾಕಾಶ ಕಾರ್ಯಕ್ರಮ ರೂಪಿಸಿವೆ. ‘ಆ್ಯಕ್ಸಿಯಂ–4’ ಅಡಿ, ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಖಾಸಗಿ ಗಗನಯಾನಿಗಳನ್ನು ಕಳುಹಿಸುತ್ತಿರುವ ನಾಲ್ಕನೇ ಕಾರ್ಯಕ್ರಮ ಇದಾಗಿದೆ’ ಎಂದೂ ನಾಸಾ ತಿಳಿಸಿದೆ.  

ADVERTISEMENT

ಕಮಾಂಡರ್ ಪೆಗ್ಗಿ ವಿಟ್ಸನ್ ನೇತೃತ್ವದ ಈ ಅಂತರಿಕ್ಷ ಕಾರ್ಯಕ್ರಮದಡಿ, ಶುಕ್ಲಾ ಅವರಲ್ಲದೇ, ಗಗನಯಾನಿಗಳಾದ ಹಂಗರಿಯ ಟಿಬೊರ್ ಕಾಪು, ಪೋಲೆಂಡ್‌ನ ಸ್ಲಾವೋಜ್ ವಿಸ್‌ನೀವ್‌ಸ್ಕಿ ಕೂಡ ಐಎಸ್‌ಎಸ್‌ಗೆ ತೆರಳಲಿದ್ದಾರೆ.

ಜೂನ್‌ 26ರಂದು ಬೆಳಿಗ್ಗೆ 7ಕ್ಕೆ (ಭಾರತೀಯ ಕಾಲಮಾನ), ಶುಭಾಂಶು ಶುಕ್ಲಾ ಅವರು ಇರುವ ಗಗನನೌಕೆಯನ್ನು ಐಎಸ್‌ಎಸ್‌ಗೆ ಜೋಡಿಸುವ ಗುರಿ ಹೊಂದಲಾಗಿದೆ.

ವಿವಿಧ ಕಾರಣಗಳಿಗಾಗಿ ಒಟ್ಟು ಆರು ಬಾರಿ ಈ ಬಾಹ್ಯಾಕಾಶ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.