ADVERTISEMENT

ಕೋವಿಡ್‌–19: 50 ಲಕ್ಷ ದಾಟಿದ ಗುಣಮುಖರ ಸಂಖ್ಯೆ

ಪಿಟಿಐ
Published 27 ಸೆಪ್ಟೆಂಬರ್ 2020, 20:30 IST
Last Updated 27 ಸೆಪ್ಟೆಂಬರ್ 2020, 20:30 IST
ಕೊರೊನಾ
ಕೊರೊನಾ   

ನವದೆಹಲಿ : ಭಾರತದಲ್ಲಿ ಕೋವಿಡ್‌–19ನಿಂದ ಗುಣಮುಖರಾದವರ ಸಂಖ್ಯೆಯು 50 ಲಕ್ಷ ದಾಟಿದೆ.
‘ಭಾನುವಾರ ಬೆಳಿಗ್ಗೆ 8 ಗಂಟೆಯವರೆಗಿನ 24 ತಾಸುಗಳಲ್ಲಿ ಒಟ್ಟು 92,043 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದ
ರೊಂದಿಗೆ ಕೋವಿಡ್‌ನಿಂದ ಒಟ್ಟು 50.03 ಲಕ್ಷಮಂದಿ ಚೇತರಿಸಿಕೊಂಡಂತಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕೋವಿಡ್‌ ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಇದುವರೆಗೂ 60.66 ಲಕ್ಷ ಮಂದಿಗೆ ಸೋಂಕು ತಗುಲಿದೆ.
ಒಟ್ಟು 95,466 ಮಂದಿ ಮೃತರಾಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9.56 ಲಕ್ಷ ಇದೆ ಎಂದು ವಿವರ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.