
ನವದೆಹಲಿ: ಭಾರತದ ವಿಮಾನ ನಿಲ್ದಾಣಗಳಲ್ಲಿ ಜಿಪಿಎಸ್ ವಂಚನೆಯ ಘಟನೆಗಳ ಹಿನ್ನೆಲೆಯಲ್ಲಿ, ಅಮೆರಿಕದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ಸ್ವದೇಶಿ ನಿರ್ಮಿತ ಜಿಪಿಎಸ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರದ ನಿರ್ದೇಶಕ ಪ್ರಕಾಶ್ ಚೌಹಾಣ್ ಬಲವಾಗಿ ಪ್ರತಿಪಾದಿಸಿದ್ದಾರೆ.
‘ಜಿಯೋಸ್ಮಾರ್ಟ್ ಇಂಡಿಯಾ ಸಮ್ಮೇಳನ ಮತ್ತು ಎಕ್ಸ್‌ಪೋ’ದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ‘ಪ್ರಸ್ತುತ ಭೌಗೋಳಿಕ ರಾಜಕೀಯ ಸನ್ನಿವೇಶದಲ್ಲಿ ಸ್ಥಳಗಳು, ದಿಕ್ಕುಗಳು ಮತ್ತು ನೈಜ ಸಮಯಗಳ (ಪಿಎನ್‌ಟಿ) ಸೇವೆಗಾಗಿ ನಮ್ಮದೇ ಆದ ಉಪಗ್ರಹಗಳ ವ್ಯವಸ್ಥೆಯನ್ನು ಹೊಂದಿರುವುದು ಇಂದಿನ ತುರ್ತು’ ಎಂದು ಹೇಳಿದ್ದಾರೆ.
ಭಾರತವು ಈಗಾಗಲೇ ಸ್ವದೇಶಿ ನಿರ್ಮಿತ ಉಪಗ್ರಹ ವ್ಯವಸ್ಥೆಯನ್ನು (ನಾವಿಕ್) ನಿರ್ವಹಿಸುತ್ತಿದೆ. ಇದನ್ನು ಅಭಿವೃದ್ಧಿಪಡಿಸಲು ಇಸ್ರೋ ಈಗಾಗಲೇ ಯೋಜನೆಗಳನ್ನು ರೂಪಿಸಿದ್ದು, ಮುಂದಿನ ವರ್ಷದಿಂದ ಹೊಸ ಉಪಗ್ರಹಗಳನ್ನು ಉಡಾವಣೆ ಮಾಡಲಾಗುವುದು ಎಂದು ಚೌಹಾಣ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.