
ಏರ್ ಇಂಡಿಯಾ
(ಚಿತ್ರ ಕೃಪೆ: ಏರ್ ಇಂಡಿಯಾ)
ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನತೆ ತೀವ್ರಗೊಂಡ ಹಿನ್ನೆಲೆ ಭಾರತದ ಪ್ರಮುಖ ಖಾಸಗಿ ವಿಮಾನಯಾನ ಸಂಸ್ಥೆಗಳಾದ ಇಂಡಿಗೊ ಮತ್ತು ಏರ್ ಇಂಡಿಯಾ, ಮಧ್ಯಪ್ರಾಚ್ಯಕ್ಕೆ ಎಲ್ಲಾ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದೆ.
‘ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಎಲ್ಲಾ ಸ್ಥಳಗಳಿಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಏರ್ ಇಂಡಿಯಾ ಏಕ್ಸ್‌ನಲ್ಲಿ ತಿಳಿಸಿದೆ.
ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆ ಮತ್ತು ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ವಿಮಾನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ಇಂಡಿಗೊ ತಿಳಿಸಿದೆ.
ಪರಮಾಣು ಒಪ್ಪಂದಕ್ಕೆ ಸ್ಪಂದಿಸದ ಕಾರಣ ಇರಾನ್ ಪರಮೋಚ್ಛ ನಾಯಕ ಆಯತೊಲ್ಲ ಖಮೇನಿ ಗುರಿಯಾಗಿಸಿಕೊಂಡು ಅಮೆರಿಕ ಮತ್ತು ಇಸ್ರೇಲ್ ದಾಳಿ ಶನಿವಾರ ದಾಳಿ ನಡೆಸಿವೆ. ಇರಾನ್ ಕೂಡ ಇಸ್ರೇಲ್ ಮೇಲೆ ಪ್ರತಿದಾಳಿ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.