ADVERTISEMENT

ಬಾಂಬ್ ಬೆದರಿಕೆ: ಮುಂಬೈಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ

ಏಜೆನ್ಸೀಸ್
Published 2 ಡಿಸೆಂಬರ್ 2025, 4:36 IST
Last Updated 2 ಡಿಸೆಂಬರ್ 2025, 4:36 IST
<div class="paragraphs"><p>ಇಂಡಿಗೊ ವಿಮಾನ</p></div>

ಇಂಡಿಗೊ ವಿಮಾನ

   

–ಪಿಟಿಐ ಚಿತ್ರ

ಮುಂಬೈ: ಹೈದರಾಬಾದ್‌ನಿಂದ ಕುವೈತ್‌ಗೆ ತೆರಳುತ್ತಿದ್ದ ಇಂಡಿಗೊ ವಿಮಾನಕ್ಕೆ ಮಂಗಳವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆ ವಿಮಾನ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿ ಭದ್ರತಾ ತಪಾಸಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಚೆಗೆ ಬಹರೇನ್‌ನಿಂದ ಹೈದರಾಬಾದ್‌ಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇ–ಮೇಲ್‌ ಕಳುಹಿಸಲಾಗಿತ್ತು.

ಜೂನ್ 22ರಂದು ಬರ್ಮಿಂಗ್‌ಹ್ಯಾಂನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬೆದರಿಕೆ ಕರೆ ಬಂದ ಕಾರಣ ವಿಮಾನವನ್ನು ಸೌದಿಯ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.