ADVERTISEMENT

ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ವಿಮಾನಕ್ಕೆ ಹಕ್ಕಿ ಡಿಕ್ಕಿ: ತುರ್ತು ಭೂಸ್ಪರ್ಶ

ಪಿಟಿಐ
Published 12 ಜನವರಿ 2026, 13:58 IST
Last Updated 12 ಜನವರಿ 2026, 13:58 IST
ಇಂಡಿಗೊ ವಿಮಾನ (ಸಾಂದರ್ಭಿಕ ಚಿತ್ರ)
ಇಂಡಿಗೊ ವಿಮಾನ (ಸಾಂದರ್ಭಿಕ ಚಿತ್ರ)   

ವಾರಾಣಸಿ: ಗೋರಖ್‌ಪುರದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ಏರ್‌ಲೈನ್ಸ್‌ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದರಿಂದ ಇಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.

‘ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ವಿಮಾನ ಭೂಸ್ಪರ್ಶವಾದ ಬಳಿಕ ಎಲ್ಲ 216 ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಅವರು ಗಮ್ಯಸ್ಥಾನ ತಲುಪಲು ಎಲ್ಲ ವ್ಯವಸ್ಥೆ ಮಾಡಲಾಗಿದೆ. ಹಕ್ಕಿ ಡಿಕ್ಕಿಯಿಂದ ವಿಮಾನದ ಮುಂಭಾಗಕ್ಕೆ ಹಾನಿಯಾಗಿದೆ’ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್‌ ಗುಪ್ತಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT