ಇಂಡಿಗೊ ವಿಮಾನ
ನವದೆಹಲಿ: ಇತ್ತೀಚಿನ ಬೆಳವಣಿಗೆ ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಇಂದು (ಮೇ 13) ದೇಶದ 6 ನಗರಗಳಲ್ಲಿ ತನ್ನ ವಿಮಾನ ಕಾರ್ಯಾಚರಣೆಯನ್ನು ರದ್ದುಗೊಳಿಸಿರುವುದಾಗಿ ಇಂಡಿಗೊ ಏರ್‌ಲೈನ್ಸ್ ತಿಳಿಸಿದೆ.
'ಪ್ರಯಾಣಿಕರ ಸುರಕ್ಷತೆ ನಮ್ಮ ಆದ್ಯತೆ. ಹಾಗಾಗಿ ಜಮ್ಮು, ಅಮೃತಸರ, ಚಂಡೀಗಢ, ಲೇಹ್, ಶ್ರೀನಗರ ಮತ್ತು ರಾಜ್‌ಕೋಟ್‌ಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ' ಎಂದು ಇಂಡಿಗೊ ಏರ್‌ಲೈನ್ಸ್ ಸೋಮವಾರ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
'ಇದರಿಂದ ನಿಮ್ಮ ಪ್ರಯಾಣಕ್ಕೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ. ನಮ್ಮ ತಂಡಗಳು ಪರಿಸ್ಥಿತಿಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿವೆ. ಹೆಚ್ಚಿನ ಅಪ್ಡೇಟ್ ಕುರಿತು ನಾವು ತಕ್ಷಣ ತಿಳಿಸುತ್ತೇವೆ. ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು, ದಯವಿಟ್ಟು ನಮ್ಮ ವೆಬ್‌ಸೈಟ್ ಅಥವಾ ಅಪ್ಲಿಕೇಶನ್ ಪರಿಶೀಲಿಸಿ. ನಿಮಗೆ ಸಹಾಯ ಮಾಡಲು ನಾವು ಸದಾ ಸಿದ್ಧರಿದ್ದೇವೆ' ಎಂದೂ ಇಂಡಿಗೊ ಪೋಸ್ಟ್‌ನಲ್ಲಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.