ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ವಿಮಾನದ ಎಂಜಿನ್‌ವೊಂದಕ್ಕೆ ಬೆಂಕಿ ತಗುಲಿದ ಕಾರಣ ವಿಮಾನವುದೆಹಲಿ ವಿಮಾನ ನಿಲ್ದಾಣದಲ್ಲಿಯೇ ತುರ್ತು ಭೂಸ್ಪರ್ಶಿಸಿದ ಘಟನೆ ಶುಕ್ರವಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ.
‘6ಇ–2131 ವಿಮಾನವು ರಾತ್ರಿ 9.30ರ ಸುಮಾರಿಗೆ ಟೇಕ್ ಆಫ್ ಆಗುವ ವೇಳೆ ಈ ಅವಘಡ ನಡೆದಿದ್ದು, ವಿಮಾನದಲ್ಲಿ 180 ಪ್ರಯಾಣಿಕರಿದ್ದರು.ಎಲ್ಲಾ ಪ್ರಯಾಣಿಕರನ್ನು ಪರ್ಯಾಯ ವಿಮಾನದ ಮೂಲಕ ಗಮ್ಯ ಸ್ಥಾನಕ್ಕೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣದ ವೇಳೆ ಉಂಟಾದ ಅನನುಕೂಲಕ್ಕೆ ವಿಷಾದಿಸುತ್ತೇವೆ’ ಎಂದು ಇಂಡಿಗೊ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರಯಾಣಿಕರು ಹಂಚಿಕೊಂಡಿರುವ ವಿಡಿಯೊದಲ್ಲಿ ವಿಮಾನ ಟೇಕ್ ಆಫ್ ಆದ ಕೂಡಲೇ ಎಂಜಿನ್‌ಗೆ ಬೆಂಕಿ ತಗುಲಿದ ದೃಶ್ಯವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.