ಸಾಂದರ್ಭಿಕ ಚಿತ್ರ
ನವದೆಹಲಿ: ಪ್ರತಿಕೂಲ ಹವಾಮಾನದಿಂದಾಗಿ ಮಂಗಳವಾರ ಮಧ್ಯಾಹ್ನ ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5 ವಿಮಾನಗಳ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಿದ್ದು, ವಿಮಾನ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಮಧ್ಯಾಹ್ನ 12.15ರಿಂದ 12.30ರ ನಡುವೆ ದೆಹಲಿಯಲ್ಲಿ ಇಳಿಯಬೇಕಿದ್ದ ಐದು ವಿಮಾನಗಳ ಮಾರ್ಗವನ್ನು ಜೈಪುರಕ್ಕೆ ಬದಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ದೆಹಲಿಯಲ್ಲಿ ಭಾರಿ ಮಳೆಯಿಂದಾಗಿ ವಿಮಾನ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿರುವ ಬಗ್ಗೆ ಏರ್ ಇಂಡಿಯಾ ಮತ್ತು ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆಗಳು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿವೆ.
ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿ ಇದೆ. ಆದರೆ, ಎಂದಿನಂತೆ ವಿಮಾನಗಳ ಕಾರ್ಯಾಚರಣೆ ಮುಂದುವರಿದಿದೆ ಎಂದು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಐಜಿಐಎ) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ದೇಶದ ಅತಿದೊಡ್ಡ ವಿಮಾನ ನಿಲ್ದಾಣವಾಗಿದ್ದು, ಪ್ರತಿದಿನ ಇಲ್ಲಿಂದ 1,300 ವಿಮಾನಗಳು ಹಾರಾಟ ನಡೆಸುತ್ತವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.