ADVERTISEMENT

ರಾಮಮಂದಿರ ನಿರ್ಮಾಣ ಕಾರ್ಯ ಮುಂದಕ್ಕೆ

ಪಿಟಿಐ
Published 19 ಜೂನ್ 2020, 5:49 IST
Last Updated 19 ಜೂನ್ 2020, 5:49 IST
ಧಾರ್ಮಿಕ ಸಮಾವೇಶವೊಂದರಲ್ಲಿ ಕಂಡು ಬಂದ ರಾಮನ ಚಿತ್ರ.  (ಸಂಗ್ರಹ ಚಿತ್ರ)
ಧಾರ್ಮಿಕ ಸಮಾವೇಶವೊಂದರಲ್ಲಿ ಕಂಡು ಬಂದ ರಾಮನ ಚಿತ್ರ. (ಸಂಗ್ರಹ ಚಿತ್ರ)    

ಅಯೋಧ್ಯೆ, ಉತ್ತರಪ್ರದೇಶ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆರಂಭಿಸುವ ಯೋಜನೆಯನ್ನು ಭಾರತ– ಚೀನಾ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಸದ್ಯಕ್ಕೆ ಕೈಬಿಡಲಾಗಿದೆ ಎಂದು ರಾಮ ಮಂದಿರ ಟ್ರಸ್ಟ್‌ ಹೇಳಿದೆ.

‘ಗಡಿಯಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿದ್ದು ಮೊದಲು ನಮಗೆ ದೇಶ ಮುಖ್ಯ’ ಎಂದು ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.

ಗಾಲ್ವನ್‌ ಕಣಿವೆಯಲ್ಲಿ ಭಾರತದ ಯೋಧರು ಹುತಾತ್ಮರಾದ ಬಗ್ಗೆ ಶೋಕ ವ್ಯಕ್ತಪಡಿಸಿರುವ ಟ್ರಸ್ಟ್‌ ಮಂದಿರ ನಿರ್ಮಾಣ ಆರಂಭಿಸುವ ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಹೇಳಿದೆ.

ADVERTISEMENT

ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪಿನ ಬಳಿಕ ರಾಮ ಮಂದಿರ ನಿರ್ಮಿಸುವ ಹೊಣೆಗಾರಿಕೆಯನ್ನು ಟ್ರಸ್ಟ್‌ ವಹಿಸಿಕೊಂಡಿದೆ.

ದೇಶದಲ್ಲಿನ ಪರಿಸ್ಥಿತಿ ನೋಡಿಕೊಂಡು ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಟ್ರಸ್ಟ್‌ನ ಸದಸ್ಯ ಅನಿಲ್‌ ಮಿಶ್ರ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಈ ಮಧ್ಯೆ ಚೀನಾ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಹಿಂದೂ ಮಹಾಸಭಾದ ಕಾರ್ಯಕರ್ತರು ಚೀನಾ ಧ್ವಜವನ್ನು ದಹಿಸಿದ್ದರೆ, ವಿಶ್ವ ಹಿಂದೂ ಪರಿಷತ್,‌ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಪ್ರತಿಕೃತಿ ದಹನ ಮಾಡಿದೆ ಅಲ್ಲದೆ ಚೀನಾ ಉತ್ಪನ್ನಗಳನ್ನು ನಾಶಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.