ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮತ್ತು ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ಮುಂಬರುವ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
73 ವರ್ಷದ ಮಾಜಿ ಸೇನಾ ಜನರಲ್ ಪ್ರಬೊವೊ ಸುಬಿಯಾಂಟೊ ಅವರು 2024ರ ಅಕ್ಟೋಬರ್‌ನಲ್ಲಿ ಇಂಡೋನೇಷ್ಯಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಸುಬಿಯಾಂಟೊ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪ್ರಮುಖ ವಿಚಾರಗಳ ಕುರಿತು ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
2024ರ ಜೂನ್‌ನಲ್ಲಿ ಸುಬಿಯಾಂಟೊ ಅವರು ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಉಭಯ ನಾಯಕರು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಕುರಿತು ಚರ್ಚಿಸಿದ್ದರು ಎನ್ನಲಾಗಿದೆ.
2024ರಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು. 2023ರಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್–ಸಿಸಿ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.