ADVERTISEMENT

ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿಗೆ ಇಂದೋರ್‌ ವಿಮಾನ ನಿಲ್ದಾಣದಲ್ಲಿ ಇಲಿ ಕಡಿತ

ಪಿಟಿಐ
Published 24 ಸೆಪ್ಟೆಂಬರ್ 2025, 11:32 IST
Last Updated 24 ಸೆಪ್ಟೆಂಬರ್ 2025, 11:32 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಇಂದೋರ್‌ : ಇಂದೋರ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಇಂದೋರ್‌ ವಿಮಾನ ನಿಲ್ದಾಣದ ನಿರ್ಗಮನ ಪ್ರದೇಶದ ಬಳಿ ಮಂಗಳವಾರ ಇಲಿ ಕಚ್ಚಿ ಗಾಯಗೊಂಡಿದ್ದಾರೆ.

ವ್ಯಕ್ತಿಗೆ ವಿಮಾನ ನಿಲ್ದಾಣದ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಘಟನೆ ಬಳಿಕ ವಿಮಾನ ನಿಲ್ದಾಣ ಆವರಣದಲ್ಲಿ ಮತ್ತೊಮ್ಮೆ ಕ್ರಿಮಿನಾಶಕ ಸಿಂಪಡಣೆ ಮಾಡಲಾಗಿದೆ ಎಂದು ದೇವಿ ಅಹಲ್ಯಾಬಾಯಿ ಹೋಳ್ಕರ್ ವಿಮಾನ ನಿಲ್ದಾಣದ ನಿರ್ದೇಶಕ ವಿಪಿನ್‌ಕಾಂತ್‌ ಸೇಠ್‌ ಅವರು ಬುಧವಾರ ತಿಳಿಸಿದ್ದಾರೆ.

ADVERTISEMENT

ಇಂದೋರ್‌ನ ಆಸ್ಪತ್ರೆಯೊಂದರಲ್ಲಿ ಇಲಿಗಳು ಕಚ್ಚಿದ್ದರಿಂದ ಎರಡು ನವಜಾತ ಹೆಣ್ಣುಶಿಶುಗಳು ಮೃತಪಟ್ಟಿದ್ದ ಘಟನೆ ಇತ್ತೀಚೆಗೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.