ADVERTISEMENT

ಸತತ 8ನೇ ಬಾರಿಗೆ ಇಂದೋರ್‌ ದೇಶದ ‘ಸ್ವಚ್ಛ ನಗರ’

ಪಿಟಿಐ
Published 17 ಜುಲೈ 2025, 7:00 IST
Last Updated 17 ಜುಲೈ 2025, 7:00 IST
<div class="paragraphs"><p>ಇಂದೋರ್‌ ನಗರ</p></div>

ಇಂದೋರ್‌ ನಗರ

   

ನವದೆಹಲಿ: ಮಧ್ಯಪ್ರದೇಶದ ಇಂದೋರ್‌ ನಗರವು ಸತತ ಎಂಟನೇ ಬಾರಿಗೆ ಭಾರತದ ಅತ್ಯಂತ ಸ್ವಚ್ಛ ನಗರ ಎಂದು ಗುರುತಿಸಲ್ಪಟ್ಟಿದೆ. ಛತ್ತೀಸಗಢದ ಅಂಬಿಕಾಪುರ, ಕರ್ನಾಟಕದ ಮೈಸೂರು ನಂತರದ ಸ್ಥಾನಗಳಲ್ಲಿವೆ.

ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ 2024–25ನೇ ಸಾಲಿನ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿಯನ್ನು ಗುರುವಾರ ಘೋಷಣೆ ಮಾಡಿದೆ.

ADVERTISEMENT

ಉತ್ತಮ ಪ್ರದರ್ಶನ ನೀಡಿದ ರಾಜ್ಯಗಳ ವಿಭಾಗದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದೆ. ಛತ್ತೀಸಗಢ ಮತ್ತು ಕರ್ನಾಟಕ ನಂತರದ ಸ್ಥಾನಗಳಲ್ಲಿವೆ.

3 ಲಕ್ಷದಿಂದ 10 ಲಕ್ಷ ಜನಸಂಖ್ಯೆಯ ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಗುಜರಾತ್‌ನ ಅಹಮದಾಬಾದ್, ಛತ್ತೀಸಗಢದ ರಾಯಪುರ, ಮಹಾರಾಷ್ಟ್ರದ ನವಿ ಮುಂಬೈ, ಗುಜರಾತ್‌ನ ಸೂರತ್ ಸ್ಥಾನ ಪಡೆದಿವೆ.

ನವದೆಹಲಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಸ್ವಚ್ಛ ನಗರ’ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಕೇಂದ್ರ ಸಚಿವ ಮನೋಹರ್ ಲಾಲ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.