ನವದೆಹಲಿ: ಮಧ್ಯಪ್ರದೇಶದ ಇಂದೋರ್ ಸತತ ನಾಲ್ಕನೇ ವರ್ಷ ‘ರಾಷ್ಟ್ರದ ಅತ್ಯಂತ ಸ್ವಚ್ಛ ನಗರ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಗುರುವಾರ ನಡೆದ ಸಮಾರಂಭದಲ್ಲಿಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಘೋಷಿಸಿದರು.
ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛತಾ ಸಮೀಕ್ಷೆಯಲ್ಲಿ ಸೂರತ್ ಮತ್ತು ನವಿ ಮುಂಬೈ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದಿವೆ.
ಕೇಂದ್ರ ಸರ್ಕಾರದ ಸ್ವಚ್ಛತಾ ಸಮೀಕ್ಷೆಯಲ್ಲಿ ವಾರಾಣಸಿಯನ್ನು 'ಅತ್ಯುತ್ತಮ ಗಂಗಾ ಪಟ್ಟಣ' ಎಂದು ಆಯ್ಕೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.